More

    ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯೋದಿಲ್ಲವೆಂದು ಮನೆಯಲ್ಲೇ ಉಳಿದಿದ್ದ ವಿದ್ಯಾರ್ಥಿನಿಯರಿಗೆ ಅಧಿಕಾರಿಗಳ ಶಾಕ್!​

    ಕೊಳ್ಳೇಗಾಲ: ಅಜ್ಜಿ ಸಾವಿನ ದುಃಖದಲ್ಲಿದ್ದ ವಿದ್ಯಾರ್ಥಿನಿ ಹಾಗೂ ಕರೊನಾ ಭೀತಿಯಲ್ಲಿದ್ದ ಇನ್ನಿಬ್ಬರು ವಿದ್ಯಾರ್ಥಿಗಳನ್ನು ಅಧಿಕಾರಿಗಳು ಮನವೊಲಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬರೆಸುವಲ್ಲಿ ಯಶಸ್ವಿಯಾಗಿದ್ದಾರೆ.

    ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ನಿವಾಸದಲ್ಲಿ ತಿಂಗಳ ಹಿಂದೆ ವಿದ್ಯಾರ್ಥಿನಿ ಪಾರ್ವತಿ ಅವರ ಅಜ್ಜಿ ಗೌರಮ್ಮ ನಿಧನರಾಗಿದ್ದರು. ಈ ದುಃಖದಲ್ಲಿದ್ದಲ್ಲಿ ಪಾವರ್ತಿ ಪರೀಕ್ಷೆ ಬರೆಯಲು ಹಿಂದೇಟು ಹಾಕಿದ್ದಳು.

    ಇದನ್ನೂ ಓದಿ: ಕಿರುತೆರೆ ನಟಿ ಮನೆಗೆ ನುಗ್ಗಿ ಯುವಕರ ಗುಂಪಿನಿಂದ ಹಲ್ಲೆ: ಅಶ್ಲೀಲ ಪದಗಳಿಂದ ನಿಂದನೆ

    ಇವರ ಚಿಕ್ಕಪ್ಪನ ಪುತ್ರಿಯರಾದ ಪ್ರೀತಿ ಮತ್ತು ಪುಷ್ಪ ಅವರು ಕರೊನಾ ಭೀತಿಯಿಂದ ಮನೆಯಲ್ಲಿ ಉಳಿದುಕೊಂಡು ಇಂದಿನ ಪರೀಕ್ಷೆಗೆ ಹಾಜರಾಗಿರಲಿಲ್ಲ.

    ಈ‌ ಮಾಹಿತಿ ತಿಳಿದ ಬಿಇಒ ಚಂದ್ರಪಾಟೀಲ್, ಸಿಂಗಾನಲ್ಲೂರು ಗ್ರಾಮದ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ ಭೇಟಿ ನೀಡಿದ ಶಾಸಕ ಆರ್.ನರೇಂದ್ರ ಅವರಿಗೆ ವಿಷಯ ಮುಟ್ಟಿಸಿ, ತುರ್ತಾಗಿ ಆ ಮೂವರು ವಿದ್ಯಾರ್ಥಿನಿಯರನ್ನು ಮನವೊಲಿಸಿ ಪರೀಕ್ಷೆ ಬರೆಸಲು ನಿರ್ದೇಶಿತರಾದರು.

    ಇದನ್ನೂ ಓದಿ: ಮೊಬೈಲ್​ನಲ್ಲಿ ಪರಿಚಯವಾದ ವ್ಯಕ್ತಿಯಿಂದ ಸ್ಟಾರ್​ ನಟಿಗೆ ದೋಖಾ: ಸ್ವಲ್ಪದರಲ್ಲೇ ತಪ್ಪಿತು ಅನಾಹುತ!

    ತಕ್ಷಣ ಎಚ್ಚೆತ್ತ ಅಧಿಕಾರಿಗಳು ಮಧುವನಹಳ್ಳಿಗೆ ಬೈಕ್ ನಲ್ಲಿ ತೆರಳಿ ವಿದ್ಯಾರ್ಥಿಗಳನ್ನು ಸಿಂಗಾನಲ್ಲೂರು ಗ್ರಾಮದ ಪರೀಕ್ಷಾ ಕೇಂದ್ರಕ್ಕೆ ಕರೆ ತಂದು ಇಂಗ್ಲೀಷ್ ಪರೀಕ್ಷೆ ಬರೆಸುವಲ್ಲಿ ಯಶಸ್ವಿಯಾಗಿದ್ದಾರೆ. (ದಿಗ್ವಿಜಯ ನ್ಯೂಸ್​)

    ಕರೊನಾ ರೋಗಲಕ್ಷಣ ಕಾಣಿಸಿಕೊಂಡ ಕೆಲವೇ ಗಂಟೆಗಳಲ್ಲಿ ಸಾಯುತ್ತಿರುವ ಜನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts