More

    ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೆಹಲಿ ರಾಜ್ಯದ ಸರ್ಕಾರಿ, ಖಾಸಗಿ ಪ್ರಾಥಮಿಕ ಶಾಲೆಗಳಿಗೆ ಮಾರ್ಚ್​ 31ರವರೆಗೆ ರಜೆ ಘೋಷಣೆ

    ನವದೆಹಲಿ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೆಹಲಿ ರಾಜ್ಯದಲ್ಲಿನ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ ಮಾರ್ಚ್​ 31ರವರೆಗೆ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ.

    ಮಾರಕ ವೈರಸ್​ ಕೊರೊನಾ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಟ್ವೀಟ್​ ಮಾಡಿದ್ದಾರೆ.

    ಈ ಮೊದಲು ದೆಹಲಿ ಸರ್ಕಾರವು ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಿಗೆ ಬಯೋಮೆಟ್ರಿಕ್​ ಹಾಜರಾತಿಯನ್ನು ರದ್ದುಗೊಳಿಸುವಂತೆ ಸಲಹೆ ನೀಡಿತ್ತು.

    ಈ ಬಗ್ಗೆ ಸಂಸ್ಥೆಗಳು ಅಧಿಕಾರಿಗಳಿಗೆ, ಕಾರ್ಯದರ್ಶಿಗಳಿಗೆ ಹಾಗೂ ಪಾಲಿಕೆಗೆ ಪತ್ರ ಬರೆದು ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಬಯೋಮೆಟ್ರಿಕ್​ ಹಾಜರಾತಿಯನ್ನು ಸದ್ಯದ ಮಟ್ಟಿಗೆ ರದ್ದುಗೊಳಿಸಬೇಕೆಂದು ತಿಳಿಸಲಾಗಿತ್ತು.

    ದೆಹಲಿಯ ಮಯೂರ ವಿಹಾರ ಎಂಬ ಪ್ರದೇಶದ ವ್ಯಕ್ತಿಯೊಬ್ಬನಿಗೆ ಮೊದಲ ಬಾರಿ ಕೊರೊನಾ ವೈರಸ್​ ಕಾಣಿಸಿಕೊಂಡಿತ್ತು. ಇದು ಆಗ್ರಾದಲ್ಲಿರುವ ಆತನ ಕುಟುಂಬದ 5 ಮಂದಿಗೂ ಸೋಂಕು ತಗುಲಲು ಕಾರಣವಾಗಿತ್ತು. ಸೋಂಕು ತಗುಲಿದ ವ್ಯಕ್ತಿಯ ಜತೆ ವ್ಯವಹಾರವಿರಿಸಿಕೊಂಡಿದ್ದ 88 ಮಂದಿಗೂ ತಪಾಸಣೆ ನಡೆಸಲಾಗಿದ್ದು, ಅವರ ಮೇಲೆ ನಿಗಾ ವಹಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts