

ಜೈಪುರ: ವೇಗವಾಗಿ ಹರಡುತ್ತಿರುವ ಮಾರಕ ಕರೊನಾ ವೈರಸ್ಗೆ ದೇಶದಲ್ಲಿ 5ನೇ ಬಲಿಯಾಗಿದೆ. ಇಟಲಿ ಮೂಲದ ಪ್ರವಾಸಿಗ ಜೈಪುರದಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಟಲಿಯಿಂದ ರಾಜಸ್ಥಾನದ ಜೈಪುರಕ್ಕೆ ಪವಾಸ ಬಂದು ಕರೊನಾ ವೈರಸ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ 69 ವರ್ಷದ ಇಟಲಿ ಪ್ರಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜೈಪುರದ ಫೋರ್ಟೀಸ್ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ತಿಳಿದುಬಂದಿದೆ.
ಸದ್ಯ ಭಾರತದಲ್ಲಿ ಸೋಂಕಿತರ ಸಂಖ್ಯೆ 200ರ ಗಡಿಯನ್ನು ದಾಟಿದ್ದು, ಪಂಜಾಬ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಆಂಧ್ರ ಪ್ರದೇಶದಲ್ಲಿ ಹೊಸ ಏಳು ಪ್ರಕರಣಗಳು ವರದಿಯಾಗಿವೆ. ಇಟಲಿ ಪ್ರಜೆ ಸೇರಿದರೆ ಈವರೆಗೂ ದೇಶದಲ್ಲಿ 5 ಮಂದಿ ಕರೊನಾಗೆ ಬಲಿಯಾಗಿದ್ದಾರೆ. (ಏಜೆನ್ಸೀಸ್)