ಬೆಂಗಳೂರು: ರಾಜ್ಯದಲ್ಲಿ ಕರೊನಾ ವೈರಸ್ ಸೋಂಕಿತರ ಸಂಖ್ಯೆ ಸೋಮವಾರ ಸಂಜೆ ವೇಳೆಗೆ 33ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ಈ ಮಾಹಿತಿ ನೀಡಿದೆ. ಕರೊನಾ ವೈರಸ್ ಸೋಂಕಿತರಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ.
ಸೋಮವಾರ ಒಂದೇ ದಿನ ರಾಜ್ಯದ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ 3 ದಿನಗಳಲ್ಲಿ 13 ಮಂದಿಯಲ್ಲಿ ಸೋಂಕು ದೃಢಪಡ್ಡಿದೆ. ಸೋಂಕು ಹರಡುವುದನ್ನು ತಪ್ಪಿಸಲು ಸರ್ಕಾರ ಕೈಗೊಂಡಿರುವ ನಿರ್ಧಾರಗಳಿಗೆ ಕೈಜೋಡಿಸಬೇಕು ಎಂದು ಇಲಾಖೆ ತಿಳಿಸಿದೆ. (ದಿಗ್ವಿಜಯ ನ್ಯೂಸ್)
ಅಧಿಕ ದರಕ್ಕೆ ಮಾಸ್ಕ್ ಮಾರಾಟ ಮಾಡುತ್ತಿದ್ದ ಮಳಿಗೆ ಮೇಲೆ ದಾಳಿ: 3 ಸಾವಿರಕ್ಕೂ ಅಧಿಕ ಮಾಸ್ಕ್ ವಶ