ಬೆಂಗಳೂರು: ಮಹಾಮಾರಿ ಕರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 463ಕ್ಕೆ ಏರಿದ್ದು, ಈವರೆಗೆ 150 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ 18 ಹೊಸ ಕೇಸುಗಳು ಪತ್ತೆಯಾಗಿವೆ. ಈ ಪೈಕಿ ಅತ್ಯಧಿಕ ಮಂದಿ 20ರ ಮೇಲ್ಪಟ್ಟು ಹಾಗೂ 40 ವರ್ಷ ಒಳಗಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ನಗರ ಒಂದರಲ್ಲಿಯೇ 11 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದನ್ನು ಹೊರತುಪಡಿಸಿದರೆ ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿ ತಲಾ 2, ವಿಜಯಪುರ, ಚಿಕ್ಕಬಳ್ಳಾಪುರ ಮತ್ತು ತುಮಕೂರಿನಲ್ಲಿ ತಲಾ ಒಂದೊಂದು ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.
ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 463ಕ್ಕೆ ಏರಿದೆ. ಈ ಪೈಕಿ 150 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿಯವರೆಗೆ 18 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಕಂಡುಬಂದ 11 ಹೊಸ ಪ್ರಕರಣಗಳಲ್ಲಿ 20ರಿಂದ 40 ವರ್ಷ ವಯಸ್ಸಿನ ಒಳಗಿನವರಾಗಿದ್ದು, ಈ ಪೈಕಿ, 10 ಮಂದಿ ಪುರುಷರಾಗಿದ್ದು, ಓರ್ವ ಮಹಿಳೆಯಾಗಿದ್ದಾರೆ.
ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್ ಅಪ್ಲಿಕೇಷ್ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಪಾದರಾಯನಪುರ ಗಲಭೆ ಪ್ರಕರಣ: ಆರೋಪಿಗಳಲ್ಲಿ ಮತ್ತೆ ಮೂವರಿಗೆ ಕರೊನಾ ಸೋಂಕು ಧೃಡ