More

    ರಾಜ್ಯದಲ್ಲಿ 489ಕ್ಕೇರಿದ ಕರೊನಾ ಸೋಂಕಿತರ ಸಂಖ್ಯೆ: ಬೆಂಗಳೂರಿನಲ್ಲಿ, ಬೆಳಗಾವಿಯ ಹೀರೆಬಾಗೇವಾಡಿಯಲ್ಲಿ ತಲಾ 6 ಹೊಸ ಪ್ರಕರಣಗಳು ಪತ್ತೆ

    ಬೆಂಗಳೂರು: ಕಿಲ್ಲರ್​ ಕರೊನಾ ವೈರಸ್​ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 489ಕ್ಕೆ ಏರಿದ್ದು, ಈವರೆಗೆ 153 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

    ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ 15 ಹೊಸ ಕೇಸುಗಳು ಪತ್ತೆಯಾಗಿವೆ. ಈ ಪೈಕಿ ಅತ್ಯಧಿಕ ಮಂದಿ 20ರ ಮೇಲ್ಪಟ್ಟು ಹಾಗೂ 40 ವರ್ಷ ಒಳಗಿರುವುದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ, 17, 18ನೇ ವಯಸ್ಸಿನ ಇಬ್ಬರಲ್ಲೂ ಕೋವಿಡ್​-19 ಪತ್ತೆಯಾಗಿದೆ. ಬೆಳಗಾವಿಯ ಹೀರೆಬಾಗೇವಾಡಿ ಹಾಗೂ ಬೆಂಗಳೂರಿನಲ್ಲಿ ತಲಾ 6 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದನ್ನು ಹೊರತುಪಡಿಸಿದರೆ ಬೆಳಗಾವಿ ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ತಲಾ ಒಂದೊಂದು ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.

    ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489ಕ್ಕೆ ಏರಿದೆ. ಈ ಪೈಕಿ 153 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿಯವರೆಗೆ 18 ಮಂದಿ ಮೃತಪಟ್ಟಿದ್ದಾರೆ.

    ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.

    ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.ರಾಜ್ಯದಲ್ಲಿ 489ಕ್ಕೇರಿದ ಕರೊನಾ ಸೋಂಕಿತರ ಸಂಖ್ಯೆ: ಬೆಂಗಳೂರಿನಲ್ಲಿ, ಬೆಳಗಾವಿಯ ಹೀರೆಬಾಗೇವಾಡಿಯಲ್ಲಿ ತಲಾ 6 ಹೊಸ ಪ್ರಕರಣಗಳು ಪತ್ತೆರಾಜ್ಯದಲ್ಲಿ 489ಕ್ಕೇರಿದ ಕರೊನಾ ಸೋಂಕಿತರ ಸಂಖ್ಯೆ: ಬೆಂಗಳೂರಿನಲ್ಲಿ, ಬೆಳಗಾವಿಯ ಹೀರೆಬಾಗೇವಾಡಿಯಲ್ಲಿ ತಲಾ 6 ಹೊಸ ಪ್ರಕರಣಗಳು ಪತ್ತೆ

    ಕಿಡ್ನಿ ವೈಫಲ್ಯದಿಂದ ದೆಹಲಿ ಜೂನಲ್ಲಿ ಮೃತಪಟ್ಟ ಬಿಳಿಹುಲಿಗೂ ಕರೊನಾ ಸೋಂಕಿತ್ತಾ? ಪರೀಕ್ಷಾ ವರದಿಯಲ್ಲಿ ಏನಿದೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts