ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಶನಿವಾರದ ಬೆಳಗಿನ ವರದಿಯ ಪ್ರಕಾರ 9 ಹೊಸ ಪ್ರಕರಣಗಳು ಸೇರ್ಪಡೆಯಾಗಿದ್ದು, ಒಟ್ಟು ಪ್ರಕರಣ 598ಕ್ಕೆ ಏರಿದೆ. ಆಶಾದಾಯಕ ಬೆಳವಣಿಗೆಯೆಂದರೆ ಈವರೆಗೆ 255 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ 9 ಹೊಸ ಪ್ರಕರಣ ಬೆಳಕಿಗೆ ಬಂದಿದ್ದು, ಇಷ್ಟು ದಿನ ಎರಡು ಅಂಕಿಯಲ್ಲಿದ್ದ ಪ್ರಕರಣಗಳು ಇದೀಗ ಒಂದಂಕಿಗೆ ಬಂದಿರುವುದು ರಾಜ್ಯದ ಜನತೆಗೆ ಖುಷಿಯ ವಿಚಾರವಾಗಿದೆ. ಇಲ್ಲಿಯವರೆಗೆ 25 ಮಂದಿ ಮೃತಪಟ್ಟಿದ್ದಾರೆ.
ಹೊಸ ಸೋಂಕಿತರ ವಿವರ ಈ ರೀತಿ ಇದೆ:
ಬೀದರ್-1, ತುಮಕೂರು- 2, ವಿಜಯಪುರ-2, ಬೆಳಗಾವಿ-1, ದಕ್ಷಿಣ ಬಾಗಲಕೋಟೆ ಜಿಲ್ಲೆ ಜಮಖಂಡಿ- 1, ಚಿಕ್ಕಬಳ್ಳಾಪುರ-1 ಮತ್ತು ಬೆಂಗಳೂರು ನಗರ ಜಿಲ್ಲೆ-1.
ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.
ಇದನ್ನೂ ಓದಿ: ಸುಳ್ಳು ಹೇಳಿ ಬಾಯ್ಫ್ರೆಂಡ್ ನೋಡಲು ಹೋದ ಕೇರಳ ಬ್ಯೂಟಿಷಿಯನ್ ದುರಂತ ಅಂತ್ಯವಾಗಿದ್ದು ಹೇಗೆ?
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್ ಅಪ್ಲಿಕೇಷ್ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಯಾವ ಜಿಲ್ಲೆಗಳಲ್ಲಿ ಎಷ್ಟು ಸೋಂಕಿತರು ಇದ್ದಾರೆ, ಎಷ್ಟು ಮಂದಿ ಬಿಡುಗಡೆ ಹೊಂದಿದ್ದಾರೆ ಎಂಬ ಬಗ್ಗೆ ವಿವರ ಇಲ್ಲಿದೆ…