

ನವದೆಹಲಿ: ಕರೊನಾ ವೈರಸ್ ಸೋಂಕಿತರ ಸಂಖ್ಯೆ ಭಾರತದಲ್ಲಿ 35,365ಕ್ಕೆ ಏರಿದ್ದು, ಸಾವಿನ ಸಂಖ್ಯೆ 1,152ಕ್ಕೇರಿದೆ. ಕಳೆದ 24 ಗಂಟೆಯಲ್ಲಿ 1993 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಮೇ 3ರಂದು ಎರಡನೇ ಹಂತದ ಲಾಕ್ಡೌನ್ ಅವಧಿ ಮುಗಿಯಬೇಕಿತ್ತು. ಆದರೆ ದಿನೇದಿನೆ ಭಾರತದಲ್ಲಿ ಕರೊನಾ ಪ್ರಸರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ನ್ನು ಮೇ 17ರವರೆಗೆ ವಿಸ್ತರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.(ಏಜೆನ್ಸೀಸ್)