More

    ರಾಜ್ಯ ಸರ್ಕಾರದಿಂದ 5ನೇ ಹಂತದ ಲಾಕ್​ಡೌನ್​ ಮಾರ್ಗಸೂಚಿ ಪ್ರಕಟ: ಯಾರಿಗೆಲ್ಲಾ ಗುಡ್​ ನ್ಯೂಸ್​?

    ನವದೆಹಲಿ: ದೇಶಾದ್ಯಂತ ಈಗ ಜಾರಿಯಲ್ಲಿರುವ ಲಾಕ್‌ಡೌನ್ ಅನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಿ ಕೇಂದ್ರ ಗೃಹ ಸಚಿವಾಲಯ ಶನಿವಾರ ಸಂಜೆ ಆದೇಶ ಹೊರಡಿಸಿದ್ದು, 5ನೇ ಹಂತದ ಲಾಕ್​ಡೌನ್​ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಇಂದು (ಭಾನುವಾರ) ಸಂಜೆ ಬಿಡುಗಡೆ ಮಾಡಿದೆ.

    ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್​: ಈ ಚಿತ್ರಗಳಲ್ಲಿರುವ ಪ್ರಾಣಿಗಳನ್ನು ಗುರುತಿಸಿದ್ರೆ ನಿಮಗೆ ಫುಲ್​ ಮಾರ್ಕ್ಸ್​!

    ನಾಲ್ಕನೇ ಹಂತದ ಲಾಕ್‌ಡೌನ್ ಇಂದು (ಮೇ 31) ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಐದನೇ ಹಂತದ ಲಾಕ್‌ಡೌನ್‌ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದ್ದು, ನೂತನ ಮಾರ್ಗಸೂಚಿಯಲ್ಲಿ ಎಲ್ಲಾ ಸಭೆ-ಸಮಾರಂಭಗಳಿಗೆ ಬ್ರೇಕ್​ ಹಾಕಲಾಗಿದೆ. ಮದುವೆ ಸಮಾರಂಭಗಳ ಮೇಲಿನ ನಿರ್ಭಂದ ಮುಂದಿನ ಆದೇಶದವರೆಗೂ ಹೀಗೆ ಮುಂದುವರಿಯಲಿದೆ.

    ರಾಜ್ಯ ಸರ್ಕಾರವೂ ಸಹ ಬಹುತೇಕ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡಲು ಸೂಚನೆ ನೀಡಿದೆ. ಮೊದಲ ಹಂತದಲ್ಲಿ ಜೂನ್ 8 ರಿಂದ ಧಾರ್ಮಿಕ ಸ್ಥಳಗಳು, ಹೋಟೆಲ್, ರೆಸ್ಟೋರೆಂಟ್ ಮತ್ತು ವಸತಿ ಗೃಹಗಳು ಹಾಗೂ ಶಾಪಿಂಗ್ ಮಾಲ್​ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

    ಇದನ್ನೂ ಓದಿ: ಇಂಥವರೂ ಇದ್ದಾರೆ: ಲಾಕ್​ಡೌನ್​ ಸಂತ್ರಸ್ತರ ನೆರವಿಗಾಗಿ ಚಿನ್ನ ಮಾರಿದ ದಂಪತಿ!

    ಎರಡನೇ ಹಂತದಲ್ಲಿ ಶಾಲಾ ಕಾಲೇಜುಗಳಲ್ಲಿ ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ. ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಣ ಸಂಸ್ಥೆಗಳು ಮುಖ್ಯಸ್ಥರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಂಡು, ಜುಲೈ ತಿಂಗಳಲ್ಲಿ ಶಾಲಾ-ಕಾಲೇಜು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ.

    ಮೂರನೇ ಹಂತದಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅಂತರಾಷ್ಟ್ರೀಯ ವಿಮಾನಯಾನ ಮತ್ತು ಮೆಟ್ರೋ ರೈಲು ಹಾಗೂ ಚಲನಚಿತ್ರ ಮಂದಿರ, ಜಿಮ್ ಮತ್ತು ಸ್ವಿಮ್ಮಿಂಗ್ ಪೂಲ್ ತೆರೆಯಲು ಅನುಮತಿ ನೀಡಲಾಗುವುದು.

    ಕೋವಿಡ್-19 ಕಾಲದ ಬೂಟುಗಳು: ಸಾಮಾಜಿಕ ಅಂತರ ಕಾಪಾಡಲು ಸಹಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts