

ಬೆಂಗಳೂರು: ರಾಜ್ಯಾದ್ಯಂತ ಕರೊನಾ ಭೀತಿ ಹೆಚ್ಚಾಗಿದೆ. ಯಾವುದೇ ಸಾರ್ವಜನಿಕ ಸಭೆ, ಸಮಾರಂಭಗಳು ನಡೆಯುತ್ತಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರೂ ಕೂಡ ಹೆಚ್ಚಿನ ಜಾಗೃತಿ ವಹಿಸುತ್ತಿದ್ದಾರೆ. ಇಂದು ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿ ಅವರ ಪುತ್ರಿಯ ಸರಳ ವಿವಾಹಕ್ಕೆ ಭೇಟಿ ನೀಡಿದ್ದ ಅವರು, ಕೈಗೆ ಸ್ಯಾನಿಟೈಸರ್ ಹಾಕಿಕೊಂಡೇ ವಧು-ವರರಿಗೆ ಶುಭಕೋರಿದರು.
ಹಾಗೇ ಸದ್ಯದ ಮಟ್ಟಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಲು ಅವರ ನಿವಾಸಕ್ಕೆ ತೆರಳುವವರು ಮತ್ತು ಅಲ್ಲಿ ಕೆಲಸ ಮಾಡುತ್ತಿರುವವರು ಹೇಗೆ ಇರಬೇಕು. ಕರೊನಾ ಮುನ್ನೆಚ್ಚರಿಕೆ ಕ್ರಮವನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದನ್ನು ಸಿಎಂ ಕಚೇರಿ ತಿಳಿಸಿದೆ.
ಯಡಿಯೂರಪ್ಪನವರನ್ನು ಭೇಟಿಯಾಗಲು ತೆರಳುವವರ ಮೇಲೆ ಸಿಎಂ ಕಚೇರಿಯಲ್ಲಿ ಇರುವವರು ನಿಗಾ ಇಡಲಿದ್ದಾರೆ. ಹಾಗೇ ಅಲ್ಲಿನ ಸಿಬ್ಬಂದಿಯೂ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ. ಮುಖ್ಯಮಂತ್ರಿಯರವನ್ನು ಭೇಟಿಯಾಗಲು ಬರುವವರಿಗೆ ಹಾಗೂ ಅಲ್ಲಿ ಕೆಲಸ ಮಾಡುತ್ತಿರುವರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಕಚೇರಿ ನೀಡಿದ ಸೂಚನೆಗಳು ಹೀಗಿವೆ: