More

    ರಾಜ್ಯದಲ್ಲಿ ಮುಂದುವರಿದ ಕರೊನಾ ಅಟ್ಟಹಾಸ: ಇಂದು 30 ವಯಸ್ಸಿಗಿಂತ ಕೆಳಗಿನವರಲ್ಲೇ ಹೆಚ್ಚು ಪ್ರಕರಣ ಪತ್ತೆ

    ಬೆಂಗಳೂರು: ರಾಜ್ಯದಲ್ಲಿ ಲಾಕ್​ಡೌನ್​ ಸಡಿಲಿಕೆ ಮಾಡಿದ್ದು ಮುಳುವಾಯ್ತಾ ಎನ್ನುವಂತಾಗಿದೆ. ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ 36 ಹೊಸ ಪ್ರಕರಣಗಳು ಬೆಳಕಿಗೆ ಬಂದು ಜನತೆಯನ್ನು ಇನ್ನಷ್ಟು ಆತಂಕಕ್ಕೀಡು ಮಾಡಿದೆ. ಈ ಪೈಕಿ 17 ಮಂದಿ ಬಾಲಕಿಯರು ಹಾಗೂ ಮಹಿಳೆಯರಾಗಿದ್ದರೆ, 19 ಮಂದಿ ಬಾಲಕರು ಹಾಗೂ ಪುರುಷರು.

    ಅದರಲ್ಲಿಯೂ ಮೂರು ನಗರಗಳ ಸ್ಥಿತಿ ಅಯೋಮಯವಾಗಿದ್ದು, ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನದವರೆಗೆ ಅಂದರೆ ಕೆಲವೇ ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಬರೋಬ್ಬರಿ 12 ಪ್ರಕರಣಗಳು ವರದಿಯಾಗಿದ್ದರೆ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 7 ಪ್ರಕರಣ ದಾಖಲಾಗಿವೆ. ದಾವಣಗೆರೆಯಲ್ಲೂ ಕರೊನಾ ಅಟ್ಟಹಾಸ ಮುಂದುವರಿದಿದ್ದು, ಇಂದು ಮತ್ತೆ 6 ಕೇಸ್​ಗಳು ಪತ್ತೆಯಾಗಿವೆ.

    ಇದನ್ನೂ ಓದಿ: ವಿಚಿತ್ರ ಕಾಯಿಲೆಯಿಂದ ಪ್ರತಿನಿತ್ಯ ನೋವುಂಡು ಬದುಕುತ್ತಿರೋ ವ್ಯಕ್ತಿಯ ಕಣ್ಣೀರ ಕತೆಯಿದು!

    ಉಳಿದಂತೆ ದಕ್ಷಿಣ ಕನ್ನಡದ ಬಂಟ್ವಾಳ, ಚಿತ್ರದುರ್ಗ ಹಾಗೂ ಬೀದರ್​ನಲ್ಲಿ ತಲಾ ಮೂರು ಹಾಗೂ ತುಮಕೂರು ಮತ್ತು ವಿಜಯಪುರದಲ್ಲಿ ತಲಾ ಒಂದು ಪ್ರಕರಣಗಳು ವರದಿಯಾಗಿವೆ.

    ಈ ಮೂಲಕ ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 789ಕ್ಕೆ ಏರಿದೆ. ಈ ಪೈಕಿ 379 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೆ ಇಲ್ಲಿಯವರೆಗೆ ಮೃತಪಟ್ಟವರು 30 ಮಂದಿ.

    ಇದನ್ನೂ ಓದಿ: VIDEO| ಭಾರತದಲ್ಲಿ ಎರಡು ತಲೆ ಹಾವು ಪತ್ತೆ: ಇದರ ವಿಶೇಷತೆ ಕೇಳಿದ್ರೆ ಶಾಕ್ ಆಗ್ತೀರಾ!

    ನಿಜಾಮುದ್ದೀನ್‌ ಮರ್ಕಜ್‌ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಉಚಿತ ಆರೋಗ್ಯ ಸಹಾಯವಾಣಿ 080-29711171 ಸಂಪರ್ಕಿಸುವಂತೆ ಸರ್ಕಾರ ಸೂಚಿಸಿದೆ.

    ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.

    ಇದನ್ನೂ ಓದಿ: ಕಿಲ್ಲರ್​ ಕರೊನಾಗೆ ರಾಮಬಾಣವಾಯ್ತಾ ಪಾಚಿ ಕಡಲೆ ಮಿಠಾಯಿ…?

    ರಾಜ್ಯದಲ್ಲಿ ಮುಂದುವರಿದ ಕರೊನಾ ಅಟ್ಟಹಾಸ: ಇಂದು 30 ವಯಸ್ಸಿಗಿಂತ ಕೆಳಗಿನವರಲ್ಲೇ ಹೆಚ್ಚು ಪ್ರಕರಣ ಪತ್ತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts