ಮಹಾರಾಷ್ಟ್ರದ ಕರೊನಾ ಸೋಂಕಿತರಿಗೆ ಸಿಹಿ ಸುದ್ದಿ ನೀಡಿದ ಉದ್ಧವ್​ ಠಾಕ್ರೆ ಸರ್ಕಾರ; ಮಹತ್ವದ ನಿರ್ಧಾರ ಪ್ರಕಟ

UDDAV
Published on

ಮುಂಬೈ: ಭಾರತದಲ್ಲಿ ಅತಿ ಹೆಚ್ಚು ಕರೊನಾ ಸೋಂಕಿತರು ಇರುವುದು ಮಹಾರಾಷ್ಟ್ರದಲ್ಲಿ. ಈಗ ಅಲ್ಲಿನ ಸರ್ಕಾರ ಒಂದು ಮಹತ್ವದ ನಿರ್ಧಾರ ಕೈಗೊಳ್ಳುವ ಮೂಲಕ ಕರೋರಾ ವೈರಸ್​ ರೋಗಿಗಳಿಗೆ ಸಿಹಿ ಸುದ್ದಿ ನೀಡಿದೆ.

ರಾಜ್ಯದ ಕರೊನಾ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡುವುದಾಗಿ ಮಹಾರಾಷ್ಟ್ರ ಸರ್ಕಾರ ಶನಿವಾರ ಘೋಷಣೆ ಮಾಡಿದೆ.

ರಾಜ್ಯದಲ್ಲಿ ಮಹಾತ್ಮಾ ಜ್ಯೋತಿಬಾ ಪುಲೆ ಜನ್​ ಆರೋಗ್ಯ ಯೋಜನೆಯಡಿ ಕರೊನಾ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವುದಾಗಿ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಇಂದು ಹೊಸದಾಗಿ 7 ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 160ಕ್ಕೆ ಏರಿದೆ. ಈ ಏಳು ಮಂದಿಯಲ್ಲಿ ಐವರು ಮುಂಬೈನವರು. ಇಬ್ಬರು ನಾಗ್ಪುರದವರು ಎಂದು ಆರೋಗ್ಯ ಇಲಾಖೆ ತಿಳಿಸಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net