More

    ಕರೊನಾ ಭೀತಿ ಹಿನ್ನೆಲೆಯಲ್ಲಿ ಇಂದಿನಿಂದಲೇ ಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಆರಂಭ

    ಬೆಂಗಳೂರು: ಕರೊನಾ ಭೀತಿ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಸೋಂಕು ಹರಡುವುದನ್ನು ತಡೆಗಟ್ಟಲು ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಿದ್ದು, ಪರೀಕ್ಷೆ ಬಗೆಗಿನ ಗೊಂದಲಕ್ಕೂ ತೆರೆ ಎಳೆದಿದೆ.

    ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯ ಪ್ರಕಾರ ಬೆಂಗಳೂರು(ಉತ್ತರ), ಬೆಂಗಳೂರು (ದಕ್ಷಿಣ) ಹಾಗೂ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಬರುವ ಪೂರ್ವ ಪ್ರಾಥಮಿಕ, ಎಲ್​ಕೆಜಿ ಹಾಗೂ ಯುಕೆಜಿ ಶಾಲಾ ವಿದ್ಯಾರ್ಥಿಗಳಿಗೆ ದಿನಾಂಕ 10/03/2020ರಿಂದಲೇ ಜಾರಿಗೆ ಬರುವಂತೆ ಬೇಸಿಗೆ ರಜೆಯನ್ನು ಘೋಷಿಸಲಾಗಿದೆ. ಇದುವರೆಗೂ ಪಾಲಕರಲ್ಲಿ ಕಾಡುತ್ತಿದ್ದ ಗೊಂದಲ ಹಿನ್ನೆಲೆಯಲ್ಲಿ ಇಂದು ಶಿಕ್ಷಣ ಇಲಾಖೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದೆ.

    ಎಲ್​ಕೆಜಿ ಹಾಗೂ ಯುಕೆಜಿ ಶಾಲಾ ವಿದ್ಯಾರ್ಥಿಗಳಿಗೆ ಸದ್ಯ ಬೇಸಿಗೆ ರಜೆ ಘೋಷಿಸುವುದು. ಬಳಿಕ 2020-21ನೇ ಶೈಕ್ಷಣಿಕ ಸಾಲಿನ ವೇಳಾಪಟ್ಟಿಯಂತೆ ಶಾಲೆಗಳನ್ನು ಪುನರಾರಂಭಿಸಲಾಗುವುದು.

    1 ರಿಂದ 6ನೇ ತರಗತಿಯ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ತಾವು ಪಡೆದಂತಹ ಎಫ್​ಎ 1, ಎಫ್​ಎ 2, ಎಫ್​ಎ 3, ಎಫ್​ಎ 4 ಮತ್ತು ಎಸ್​ಎ 1ರಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಪ್ರಕಟಿಸಿ, ಮುಂದಿನ ತರಗತಿಗಳಿಗೆ ಬಡ್ತಿ ನೀಡುವುದು ಹಾಗೂ ಬೇಸಿಗೆ ರಜೆಯನ್ನು ಇಂದಿನಿಂದಲೇ ಘೋಷಿಸುವುದು. ರಜೆ ಮುಗಿದ ಬಳಿಕ 2020-21ನೇ ಶೈಕ್ಷಣಿಕ ಸಾಲಿನ ವೇಳಾಪಟ್ಟಿಯಂತೆ ಶಾಲೆಗಳನ್ನು ಮರು ಆರಂಭಿಸುವುದು.

    7 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ 13/3/20ರಿಂದ ಜಾರಿಗೆ ಬರುವಂತೆ ತರಗತಿಗಳನ್ನು ಪರೀಕ್ಷಾ ಪೂರ್ವಸಿದ್ಧತಾ ರಜೆ ನೀಡಿ, ಪರೀಕ್ಷಾ ದಿನಗಳಂದು ಮಾತ್ರ ಹಾಜರಾಗಲು ಸೂಚಿಸುವುದು. 7 ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ 23/3/20ರೊಳಗೆ ಎಲ್ಲ ಪರೀಕ್ಷೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಬೇಸಿಗೆ ರಜೆಯನ್ನು ಘೋಷಿಸುವುದು.

    ವಿಶೇಷವಾಗಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ನಿಗದಿಯಾಗಿರುವ ವೇಳಾಪಟ್ಟಿಯಂತೆ ಪರೀಕ್ಷೆಯನ್ನು ನಡೆಸುವುದು ಹಾಗೂ ಬೇಸಿಗೆಯ ನಂತರ 2020-21ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಶಾಲೆಗಳನ್ನು ಪುನಾರಂಭ ಮಾಡುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

    ಕರೊನಾ ಭೀತಿ ಹಿನ್ನೆಲೆಯಲ್ಲಿ ಇಂದಿನಿಂದಲೇ ಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಆರಂಭ

    ಕರೊನಾ ಭೀತಿ ಹಿನ್ನೆಲೆಯಲ್ಲಿ ಇಂದಿನಿಂದಲೇ ಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಆರಂಭ

    ಕರೊನಾ ಭೀತಿ ಹಿನ್ನೆಲೆಯಲ್ಲಿ ಇಂದಿನಿಂದಲೇ ಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಆರಂಭ

    ಶುಲ್ಕ ಪಾವತಿ ಮಾಡದ ವಿದ್ಯಾರ್ಥಿಗಳನ್ನು ಹೊರಹಾಕಿದ ಖಾಸಗಿ ಶಾಲೆ ಆಡಳಿತ ಮಂಡಳಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts