More

    ಶ್ರಮಿಕ ವರ್ಗಕ್ಕೆ ವಿಶೇಷ ಪ್ಯಾಕೇಜ್ ಕೊಡಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ, ನೀಡದಿದ್ದರೆ ಪ್ರತಿಭಟನೆ ಎಚ್ಚರಿಕೆ

    ಬೆಂಗಳೂರು: ಸಾಂಪ್ರದಾಯಿಕ ವೃತ್ತಿ ನಂಬಿಕೊಂಡವರು ಹಾಗೂ ಶ್ರಮಿಕ ವರ್ಗ ಲಾಕ್​ಡೌನ್​ನಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದು, ಅವರಿಗೆ ವಿಶೇಷ ಪ್ಯಾಕೇಜ್ ಘೊಷಣೆ ಮಾಡಿ ಸರ್ಕಾರ ನೆರವು ನೀಡಬೇಕು. ಇಲ್ಲವಾದಲ್ಲಿ ಲಾಕ್​ಡೌನ್ ಮುಗಿದ ಕೂಡಲೇ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಸಾಂಪ್ರದಾಯಿಕ ವೃತ್ತಿ ಮಾಡುವ ವಿವಿಧ ಸಮುದಾಯಗಳು, ಆಟೋ, ಟ್ಯಾಕ್ಸಿ ಸೇರಿ ನಾನಾ ಸಾರಿಗೆ ಸಂಘಟನೆಗಳ ಮುಖಂಡರ ಜತೆ ಸುದೀರ್ಘ ಚರ್ಚೆ ನಡೆಸಿ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಲಾಕ್​ಡೌನ್ ಜಾರಿಯಾಗಿ ತಿಂಗಳು ಕಳೆದಿದ್ದು, ಸಾಂಪ್ರದಾಯಿಕ ವೃತ್ತಿಯನ್ನೇ ಅವಲಂಭಿಸಿರುವ ಸಮುದಾಯಗಳ ಬದುಕು ಚಿಂತಾಜಕವಾಗಿದೆ. ಸರ್ಕಾರ ಈಗ ವಿತರಣೆ ಮಾಡುತ್ತಿರುವ ದವಸ-ಧಾನ್ಯದ ಕಿಟ್​ಗಳು ಎಲ್ಲರನ್ನೂ ತಲುಪುತ್ತಿಲ್ಲ. ಅದಕ್ಕಾಗಿಯೇ ವಿಶೇಷ ಪ್ಯಾಕೇಜ್ ಘೊಷಣೆ ಮಾಡಬೇಕು.

    ರಾಜ್ಯಾದ್ಯಂತ ಸವಿತಾ ಸಮಾಜ, ಮಡಿವಾಳರು, ಕುಂಬಾರರು, ಅಕ್ಕಸಾಲಿಗರು, ಗಾಣಿಗ ಸಮುದಾಯದವರು ತೀವ್ರ ನಷ್ಟಕ್ಕೊಳಗಾಗಿದ್ದಾರೆ. 20 ಲಕ್ಷ ಸಂಘಟಿತ ಕಾರ್ವಿುಕರಿದ್ದು, ಈ ಪೈಕಿ 12 ಲಕ್ಷ ಮಂದಿಗೆ ಮಾತ್ರ ಸರ್ಕಾರ ಕಾರ್ವಿುಕ ಕಲ್ಯಾಣ ನಿಧಿಯಿಂದ 2 ಸಾವಿರ ರೂ.ಗಳ ಸಹಾಯಧನ ನೀಡಿದೆ. ಬಿಜೆಪಿ ಶಾಸಕರ ಕ್ಷೇತ್ರಗಳಲ್ಲಿ ಕೆಲವು ಕಾರ್ವಿುಕರಿಗೆ ಮಾತ್ರ ಆಹಾರದ ಪ್ಯಾಕೇಟ್​ಗಳು ದೊರೆಯುತ್ತಿದೆ. ಬೆಂಗಳೂರಿನಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದ್ದು, ಇದು ಸರಿಯಲ್ಲ ಎಂದು ಹೇಳಿದರು. ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಕ್ರೋಢಿಕರಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಎಂದರು.

    ಮದ್ಯ ಮಾರಾಟಕ್ಕೆ ಸಲಹೆ: ರಾಜ್ಯದ ಹಸಿರು ವಲಯದಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ಕೊಡಬಹುದು ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

    30ಕ್ಕೆ ಪ್ರತಿಪಕ್ಷ ನಾಯಕರ ಸಭೆ

    ಲಾಕ್​ಡೌನ್​ನಿಂದ ರೈತರು, ಕಾರ್ವಿುಕರು, ಮಧ್ಯಮ ವರ್ಗದವರು, ಶ್ರಮಿಕ ವರ್ಗದವರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ರ್ಚಚಿಸಲು ಗುರುವಾರ ಪ್ರತಿ ಪಕ್ಷಗಳ ನಾಯಕರ ಸಭೆ ಕರೆದಿದ್ದೇನೆ. ಜೆಡಿಎಸ್, ಜೆಡಿಯು, ಸಿಪಿಐ, ಸಿಪಿಐಎಂ, ಬಿಎಸ್​ಪಿ, ರೈತ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

    ಪ್ರಮುಖ ಬೇಡಿಕೆಗಳು

    • ಆಟೋ, ಟ್ಯಾಕ್ಸಿ ವಾಹನಗಳ ಮಾಸಿಕ ಕಂತು, ವಿಮಾ ಕಂತು ರಸ್ತೆ ತೆರಿಗೆ ಪಾವತಿಯಿಂದ ಕೆಲ ತಿಂಗಳು ವಿನಾಯಿತಿ ನೀಡಬೇಕು.
    • ಸೆಲೂನ್​ಗಳನ್ನು ತೆರೆಯಲು ಅವಕಾಶ ಮಾಡಿಕೊಡಬೇಕು.
    • ಶ್ರಮಿಕ ವರ್ಗದವರ ಮಕ್ಕಳ ಶಾಲಾ ಶುಲ್ಕ ಪಾವತಿಗೆ ವಿನಾಯಿತಿ ನೀಡಬೇಕು.
    • ಬೀದಿ ಬದಿಯ ವ್ಯಾಪಾರಿಗಳು ಮತ್ತೆ ವ್ಯಾಪಾರ ಆರಂಭಿಸಲು ಬಂಡವಾಳ ನೀಡಬೇಕು.
    • ಲಾಕ್​ಡೌನ್ ಅವಧಿಯಲ್ಲಿ ಪೊಲೀಸರ ವಶಪಡಿಸಿಕೊಂಡಿರುವ ವಾಣಿಜ್ಯ ಬಳಕೆಯ ವಾಹನಗಳನ್ನು ಬಿಡುಗಡೆ ಮಾಡಬೇಕು.

    ಕ್ವಾರಂಟೈನ್ ಆಗಿರುವ ಬಿಹಾರಿ ಕಾರ್ಮಿಕರು ಏನೇನು ಸೌಕರ್ಯ ಕೇಳ್ತಿದಾರೆ ನೋಡಿ…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts