

ಶಿಮ್ಲಾ: ರಾಷ್ಟ್ರದಲ್ಲಿ ಕರೊನಾ ವೈರಸ್ ಸೋಂಕು 10ನೆ ಬಲಿ ಪಡೆದಿದೆ. ಹಿಮಾಚಲ ಪ್ರದೇಶದಲ್ಲಿ ಸೋಂಕಿಗೆ ತುತ್ತಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅಮೆರಿಕಾದಿಂದ ಬಂದಿದ್ದ 68 ವರ್ಷದ ವೃದ್ಧನೊಬ್ಬ ಸೋಂಕಿಗೆ ಬಲಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ರಾಷ್ಟ್ರದಲ್ಲಿ ಕರೊನಾ ವೈರಸ್ ಸೋಂಕಿಗೆ ಬಲಿಯಾದ 10ನೇ ಹಾಗೂ ಹಿಮಾಚಲ ಪ್ರದೇಶದ ಮೊದಲ ಪ್ರಕರಣ ಆಗಿದೆ.
ಅಮೆರಿಕಾದಿಂದ ಪ್ರವಾಸಕ್ಕೆ ಬಂದಿದ್ದ ವೃದ್ಧನಿಗೆ ಸೋಂಕು ಇರುವುದು ಪತ್ತೆಯಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಾಷ್ಟ್ರದಲ್ಲಿ ಕರೊನಾ ವೈರಸ್ಗೆ ಮೊದಲ ಬಲಿ ಸಂಭವಿಸಿದ್ದು ರಾಜ್ಯದಲ್ಲಿ. ನಂತರ ದೆಹಲಿ, ರಾಜಸ್ಥಾನ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸಾವು ಸಂಭವಿಸಿದೆ. ಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. (ಏಜೆನ್ಸೀಸ್)