More

    ನಿಗಮ- ಮಂಡಲಿ ನೇಮಕಾತಿ: ತಾತ್ಕಾಲಿಕ ಪಟ್ಟಿ ಪ್ರಕಟಿಸಿದ ಕೆಇಎ

    ಬೆಂಗಳೂರು ಕಿಯೋನಿಕ್ಸ್, ಎಂಎಸ್‌ಐಎಲ್ ಸೇರಿ ಆರು ನಿಗಮ- ಮಂಡಳಿಗಳ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,17,961 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ.

    ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (41 ಹುದ್ದೆ), ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 725 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು.

    ಈ ತಾತ್ಕಾಲಿಕ ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಇದೇ 29ರೊಳಗೆ ಇ-ಮೇಲ್ (kea2023examgmail.com) ಮೂಲಕ ಸಲ್ಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts