More

  ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ ಮಳಿಗೆಗಳಿಗೆ ಪಾಲಿಕೆ ಬೀಗ

  ಬೆಂಗಳೂರು: ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ ಆರು ಮಳಿಗೆಗಳಲ್ಲಿ ಪ್ಲಾಸ್ಟಿಕ್ ವಶಪಡಿಸಿಕೊಂಡ ಬಳಿಕ ಬೀಗ ಹಾಕಿ ಸೀಲ್ ಮಾಡುವ ಕಠಿಣ ಕ್ರಮವನ್ನು ಬಿಬಿಎಂಪಿ ಕೈಗೊಂಡಿದೆ.

  ಜೆ.ಪಿ.ಪಾರ್ಕ್ ವಾರ್ಡ್‌ನ ಮೋಹನ್‌ಕುಮಾರ್ ಮುಖ್ಯರಸ್ತೆಯಲ್ಲಿನ ಮಳಿಗೆಗಳು ಹಾಗೂ ರಾಜರಾಜೇಶ್ವರಿನಗರ ವಾರ್ಡ್‌ನ ಐಡಿಯಲ್ ಹೋಮ್ಸ್ನಲ್ಲಿನ ಜವಹಾರ್ ಲಾಲ್ ನೆಹರು ರಸ್ತೆಯಲ್ಲಿರುವ ಮಳಿಗೆಗಳಿಗೆ ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಮೊದಲೇ ಸೂಚನೆ ನೀಡಲಾಗಿತ್ತು. ಆದರೂ, ಗುರುವಾರ ಪರಿಶೀಲನೆ ನಡೆಸಿದ ವೇಳೆ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿರುವುದನ್ನು ಗಮನಿಸಿ ಆರ್.ಎಸ್. ವೆಜಿಟೆಬಲ್ ಮಳಿಗೆ, ಗ್ರೀನ್ ವಾಲಿ ಫಾರ್ಮ್, ಜಾಫರ್ ಫೋಟ್ ಶಾಪ್, ಮಾತಾಜಿ ಡಿಪಾರ್ಟ್ಮೆಂಟಲ್ ಸ್ಟೋರ್ಸ್, ಸತೀಶ್ ಸ್ಟೋರ್ಸ್, ಕನಕಶ್ರೀ ಕ್ರೀಯೇಷನ್ಸ್ ಸೇರಿ 6 ಮಳಿಗೆಗಳಿಗೆ ಬೀಗ ಹಾಕಲಾಯಿತು ಎಂದು ಆರ್.ಆರ್.ನಗರ ವಲಯದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

  ಪರಿಶೀಲನೆಯ ವೇಳೆ ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಭಿಯಂತರ, ಕಾಮಗಾರಿ ವಿಭಾಗದ ಅಭಿಯಂತರ, ಆರೋಗ್ಯ ವಿಭಾಗದ ಅಧಿಕಾರಿಗಳು, ಮಾರ್ಷಲ್ಗಳು ಹಾಗೂ ಸ್ಥಳೀಯ ಪೋಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

  44,400 ರೂ. ದಂಡ ವಸೂಲಿ:

  ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ ಬೀದಿ ಬದಿ ವ್ಯಾಪಾರಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿದ್ದ ಮಳಿಗೆಗೆಗಳಿಂದ ಒಟ್ಟು 44,400 ರೂ. ದಂಡ ಕೂಡ ವಸೂಲಿ ಮಾಡಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts