More

    ಪಾಲಿಕೆ ವೈದ್ಯರಿಬ್ಬರ ವಿರುದ್ಧ ಕಾನೂನು ಕ್ರಮಕ್ಕೆ ಎನ್.ಆರ್​. ರಮೇಶ್ ಆಗ್ರಹ

    ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ 2ನೇ ಅಲೆಯ ವೇಳೆ ಪಾಲಿಕೆಯ ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಇಬ್ಬರು ವೈದ್ಯಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಬಿಜೆಪಿ ಮುಖಂಡ ಎನ್.ಆರ್​. ರಮೇಶ್ ಅವರು ಬಿಬಿಎಂಪಿಯ ಆಡಳಿತಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

    ಪೂರ್ವ ವಲಯದ ಆರೋಗ್ಯ ಅಧಿಕಾರಿ ಆಗಿದ್ದ ಡಾ.ಸವಿತ ಮತ್ತು ಶಾಂತಿನಗರ ವಿಭಾಗದ ಆರೋಗ್ಯ ವೈದ್ಯಾಧಿಕಾರಿಯಾದ ಡಾ. ಶ್ರೀನಿವಾಸ್ ಗೌಡ ಅವರು ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿ ಕೆಲ ಬಿಲ್‌ಗಳನ್ನು ನೌಕರರ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ವಲಯ ಆಯುಕ್ತರ ಅನುಮೋದನೆ ಇಲ್ಲದೆ ಹಾಗೂ ಆರೋಗ್ಯ ವಿಭಾಗದ ವಿಶೇಷ ಆಯುಕ್ತರ ಅನುಮತಿಯನ್ನು ಪಡೆಯದೆಯೆ ನೇರವಾಗಿ ಬಿಲ್ ಮಾಡಿ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ನಷ್ಟವನ್ನುಂಟು ಮಾಡಿದ್ದಾರೆ. ಈ ರೀತಿ ಹಣ ವರ್ಗಾವಣೆ ಮಾಡುವಾಗ ಯಾವುದೇ ಹಿರಿಯ / ಕಿರಿಯ ಆರೋಗ್ಯ ಪರಿವೀಕ್ಷಕರ ಗಮನಕ್ಕೆ ತಾರದೆಯೇ ಅವರವರ ಖಾತೆಗಳಿಗೆ ಹಣ ವರ್ಗಾಯಿಸಿ ನಂತರ ಈ ಹಣವನ್ನು ಡಾ. ಸವಿತ ಅವರ ಮಗನ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದಾರೆ ಎಂದು ಪತ್ರದಲ್ಲಿ ನಮೂದಿಸಲಾಗಿದೆ.

    ಈ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಜತೆಗೆ ಈ ಇಬ್ಬರೂ ಅಧಿಕಾರಿಗಳ ವಿರುದ್ಧ ವಂಚನೆ, ಅಧಿಕಾರ ದುರುಪಯೋಗ, ನಕಲಿ ದಾಖಲೆ ತಯಾರಿಕೆ ಪ್ರಕರಣಗಳನ್ನು ದಾಖಲಿಸಿಕೊಂಡು ಕ್ರಮ ತೆಗೆದುಕೊಳ್ಳುವಂತೆ ಕೋರಿ ಬಿಎಂಟಿಎ್ನಲ್ಲಿ ದಾಖಲೆಗಳ ಸಹಿತ ದೂರನ್ನು ಸಲ್ಲಿಸಲಾಗಿದೆ ಎಂದು ಎನ್.ಆರ್. ರಮೇಶ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts