More

    ಶವ ದಹನಕ್ಕೆ ಅನುಕೂಲ ಮಾಡಿಕೊಡಲು ಒತ್ತಾಯ

    ಮಾಂಜರಿ: ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಜೈನ್, ಮರಾಠಾ, ಬ್ರಾಹ್ಮಣ ಮತ್ತು ಪಾಂಚಾಳ ಸೇರಿ ವಿವಿಧ ಜನಾಂಗದವರ ಶವ ದಹನ ಕಾರ್ಯಕ್ಕೆ ಸಮರ್ಪಕ ಸೌಲಭ್ಯ ಇಲ್ಲದ ಕಾರಣ ತೊಂದರೆ ಅನುಭವಿಸುತಿದ್ದು, ಸ್ಮಶಾನದಲ್ಲಿ ಶೆಡ್ ನಿರ್ಮಿಕೊಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಗ್ರಾಮದ ಹೊರವಲಯದಲ್ಲಿದ್ದ ಗಳಗತಾ ರಸ್ತೆಯ ಬ್ರಿಡ್ಜ್ ಬಳಿಯ ಹಳ್ಳದಲ್ಲಿ ಶವಗಳನ್ನು ಬಯಲಲ್ಲೇ ದಹನ ಮಾಡಲಾಗುತ್ತಿದೆ. ಮಳೆಗಾಲದಲ್ಲಿ ಬಯಲಿನಲ್ಲಿ ಶವ ದಹನ ಮಾಡಲು ಸಾಧ್ಯವಾಗುವುದಿಲ್ಲ. ಅದೇ ರೀತಿ ಬೇಸಿಗೆ ಕಾಲದಲ್ಲಿ ಬಿಸಿಲಿನ ಕಾರಣ ಶವಶಂಸ್ಕಾರಕ್ಕೆ ಕಷ್ಟವಾಗುತ್ತದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಖಡಕಲಾಟನಲ್ಲಿ 20 ಸಾವಿರ ಜನಸಂಖ್ಯೆ ಇದ್ದು, ಇಲ್ಲಿನವರು ಯಾರಾದರು ಮೃತಪಟ್ಟಲ್ಲಿ ಶವ ಸಂಸ್ಕಾರಕ್ಕೆ ತೊಂದರೆಯಾಗುತ್ತಿದೆ. ಶವಗಳನ್ನು ದಹನ ಮಾಡುವವರ ಗೊಳನ್ನು ಗಮನದಲ್ಲಿಟ್ಟುಕೊಂಡು ಈ ಭಾಗದ ಜನಪ್ರತಿನಿಧಿಗಳು ಶವ ದಹನ ಗೋಪುರ ನಿರ್ಮಿಸಬೇಕು. ಶವ ಸಂಸ್ಕಾರಕ್ಕೆ ಬರುವ ಸಾರ್ವಜನಿಕರಿಗೆ ಆಸನ ವ್ಯವಸ್ಥೆ, ನೀರಿನ ವ್ಯವಸ್ಥೆ ಮಾಡುವುದರ ಜತೆಗೆ ಕಾಂಪೌಂಡ್ ನಿರ್ಮಿಸಿಕೊಡಬೇಕು ಎಂದು ವಿವಿಧ ಸಮಾಜದವರು ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts