More

    ಭ್ರಷ್ಟಾಚಾರದ ತನಿಖೆ ಎದುರಿಸಲು ಎಲ್ಲ ರೀತಿಯಿಂದ ಸಿದ್ಧ- ರಮೇಶ ಕುಮಾರ

    ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತು ದಾಖಲೆಗಳಿದ್ದರೆ ಬಿಜೆಪಿ ಸರ್ಕಾರದ ಸಚಿವರು ಬಿಡುಗಡೆ ಮಾಡಿ ತನಿಖೆ ನಡೆಸಲಿ. ತನಿಖೆ ಎದುರಿಸಲು ಎಲ್ಲ ರೀತಿಯಿಂದ ಸಿದ್ಧರಾಗಿದ್ದೇವೆ ಎಂದು ಮಾಜಿ ಸಚಿವ ರಮೇಶ ಕುಮಾರ ಸವಾಲು ಹಾಕಿದ್ದಾರೆ.

    ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರು, ಕಾರ್ಯಕರ್ತರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸಚಿವರು ಆರೋಪಿಸಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆಗೆ ನಾವು ಸಿದ್ಧರಿದ್ದೇದೆ. ಕೋವಿಡ್-19 ನಿಯಂತ್ರಣದ ಹೆಸರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಅವ್ಯವಹಾರ ನಡೆಸಿದೆ. ಮಾರುಕಟ್ಟೆಯಲ್ಲಿ ಕಡಿಮೆ ದರದಲ್ಲಿ ಸಿಗುವ ವೈದ್ಯಕೀಯ ಸಲಕರಣೆಗಳನ್ನು ಹೆಚ್ಚಿನ ದರಕ್ಕೆ ಖರೀದಿಸಿದ್ದಾರೆ.

    ತಮ್ಮ ತಪ್ಪನ್ನು ಮುಚ್ಚಿ ಹಾಕಿಕೊಳ್ಳಲು ಹಿಂದಿನ ಸರ್ಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸುವವರು ಅವತ್ತೇಕೆ ಮೌನವಾಗಿದ್ದರು ಎಂದು ಪ್ರಶ್ನಿಸಿದರು. ವೈದ್ಯಕೀಯ ಸಲಕರಣೆಗಳನ್ನು ಮಾರುಕಟ್ಟೆಗಿಂತ ಐದು ಪಟ್ಟು ದರ ನೀಡಿ ಖರೀದಿಸುವುದರಲ್ಲಿ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ.

    ಹಾಗಾಗಿಯೇ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು ಎಂದು ನಮ್ಮ ಪಕ್ಷ ಆಗ್ರಹಿಸುತ್ತಿದೆ. ವಿಪತ್ತಿನಲ್ಲಿ ನಾವು ಸರ್ಕಾರಕ್ಕೆ ಸಹಕಾರ ನೀಡಿದ್ದೇವೆ. ಆದರೆ, ಆಡಳಿತ ಪಕ್ಷದ ಸರ್ಕಾರ ಪ್ರತಿಪಕ್ಷಗಳನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕಿ ಅಂಜಲಿ ನಿಂಬಾಳ್ಕರ್, ಎಂಎಲ್‌ಸಿ ನಿಸಾರ್ ಅಹ್ಮದ್, ಮಾಜಿ ಶಾಸಕ ಫಿರೋಜ್ ಶೇಠ್ ಇನ್ನಿತರರು ಇದ್ದರು.

    ಕೋವಿಡ್-19ನಿಂದ ದೇಶದಲ್ಲಿ ಎಲ್ಲವನ್ನು ನಿರ್ಬಂಧಿಸಲಾಗಿದೆ. ಸಮಾವೇಶ ಆಗುವಂತಿಲ್ಲ. ಸಭೆ, ಧಾರ್ಮಿಕ ಕೆಲಸಗಳು ನಡೆಯುವಂತಿಲ್ಲ. ಬಕ್ರೀದ್ ಹಬ್ಬಕ್ಕೆ ಜನರು ಸೇರದಂತೆ ನಿರ್ಬಂಧಿಸಲಾಯಿತು. ತಿರುಪತಿ ದೇವಸ್ಥಾನದ ಬಾಗಿಲು ಮುಚ್ಚಲಾಯಿತು. ಇಂತಹ ಸ್ಥಿತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮ ಮಾಡಲು ಹೊರಟಿರುವ ಬಿಜೆಪಿಯವರನ್ನು ರಾಮನೇ ಕಾಪಾಡಬೇಕು.
    |ರಮೇಶ ಕುಮಾರ ಮಾಜಿ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts