More

    ಭ್ರಷ್ಟ ಅಧಿಕಾರಿಗೆ 15 ವರ್ಷಗಳ ಬಳಿಕ 2 ವರ್ಷ ಸಜೆ, 60 ಲಕ್ಷ ರೂ. ದಂಡ!

    ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ ಭ್ರಷ್ಟ ಅಧಿಕಾರಿಯೊಬ್ಬರಿಗೆ ಪ್ರಕರಣ ದಾಖಲಾದ 15 ವರ್ಷಗಳ ಬಳಿಕ ಶಿಕ್ಷೆ ಘೋಷಣೆ ಆಗಿದೆ. 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ವಿಶೇಷ ನ್ಯಾಯಾಧೀಶರು ಭ್ರಷ್ಟ ಅಧಿಕಾರಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

    ಇದನ್ನೂ ಓದಿ: ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!

    ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಆಹಾರ ನಿರೀಕ್ಷಕ ಆಗಿದ್ದ ನಾಗಲಿಂಗಯ್ಯ ಶಿಕ್ಷೆಗೊಳಗಾದ ಅಧಿಕಾರಿ. ಈತನ ವಿರುದ್ಧ ಕಾನೂನುಬದ್ಧ ಆದಾಯಕ್ಕಿಂತ ಅಧಿಕ ಆಸ್ತಿಯನ್ನು ಹೊಂದಿರುವ ಆರೋಪದ ಮೇಲೆ ಬೆಂಗಳೂರು ನಗರದ ಲೋಕಾಯುಕ್ತ ಪೊಲೀಸರು 2008ರ ಡಿ. 18ರಂದು ಪ್ರಕರಣ ದಾಖಲಿಸಿಕೊಂಡಿದ್ದರು.

    ಇದನ್ನೂ ಓದಿ: ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಆರೋಪಿ ವಿರುದ್ಧ ತನಿಖೆ ಕೈಗೊಂಡ ನಂತರ ದೋಷಾರೋಪಣ ಪಟ್ಟಿಯನ್ನು ಸಂಬಂಧಿಸಿದ ನ್ಯಾಯಾಲಯಕ್ಕೆ ಸಲ್ಲಿಸಿದ್ದರ ಮೇರೆಗೆ ನ್ಯಾಯಾಲಯವು ಸ್ಪೆಷಲ್ ಸಿ.ಸಿ. 74/2013ರಂತೆ ಪ್ರಕರಣ ನೋಂದಾಯಿಸಿಕೊಂಡು, ವಿಚಾರಣೆ ನಡೆಸಿತ್ತು. 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ವಿಶೇಷ ನ್ಯಾಯಾಧೀಶರು (ಸಿಸಿಹೆಚ್24) ಅಪರಾಧಿಗೆ 2 ವರ್ಷಗಳ ಕಠಿಣ ಸಜೆ ಹಾಗೂ 60 ಲಕ್ಷ ರೂ. ದಂಡ ವಿಧಿಸಿ ಇಂದು ತೀರ್ಪು ನೀಡಿರುತ್ತಾರೆ. ಒಂದು ವೇಳೆ ದಂಡದ ಮೊತ್ತ ಪಾವತಿಸಲು ಈತ ವಿಫಲನಾದಲ್ಲಿ ಮೂರು ತಿಂಗಳ ಸಾದಾ ಸಜೆಯನ್ನು ಹೆಚ್ಚುವರಿಯಾಗಿ ವಿಧಿಸಿರುವುದು ತೀರ್ಪಿನಲ್ಲಿದೆ.

    ಸಿಂಹವನ್ನೇ ಹೋಲುವ ಕರುವಿಗೆ ಜನ್ಮ ನೀಡಿದ ಹಸು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts