More

    ‘ಶಕ್ತಿ’ ಯೋಜನೆಯಲ್ಲೂ ಭ್ರಷ್ಟಾಚಾರ?: ವಿಡಿಯೋದಲ್ಲಿ ಸೆರೆಯಾಯ್ತು ಆ ದೃಶ್ಯ!

    ಬೆಂಗಳೂರು: ಕಾಂಗ್ರೆಸ್ ವಿಧಾನಸಭಾ ಚುನಾವಣೆಗೂ ಮುನ್ನ ಐದು ಗ್ಯಾರಂಟಿಗಳನ್ನು ಘೋಷಿಸಿ ಮತಗಳನ್ನು ಸೆಳೆದು ಭರ್ಜರಿ ಬಹುಮತದೊಂದಿಗೆ ಗೆಲುವನ್ನು ಪಡೆದು ಅಧಿಕಾರವನ್ನೂ ಗಳಿಸಿದೆ. ಆದರೆ ಆ ಗ್ಯಾರಂಟಿಗಳ ಪೈಕಿ ಒಂದಾಗಿರುವ ಶಕ್ತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆಯೇ ಎಂಬ ಅನುಮಾನ ಇದೀಗ ಮೂಡುವಂತಾಗಿದೆ.

    ಕಾಂಗ್ರೆಸ್ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ ಹಾಗೂ ಅನ್ನಭಾಗ್ಯ ಎನ್ನುವ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಜಾರಿಗೂ ತಂದಿದೆ. ಆ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡುವ ಶಕ್ತಿ ಯೋಜನೆ ಭಾರಿ ಜನಪ್ರಿಯತೆ ಗಳಿಸಿದ್ದಲ್ಲದೆ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು.

    ಈ ಯೋಜನೆ ಜಾರಿಯಾಗಿ ಸೆ. 21ಕ್ಕೆ ನೂರು ದಿನಗಳನ್ನು ಪೂರೈಸಿದೆ. ಈ ವರೆಗೆ ಒಟ್ಟು 64 ಕೋಟಿ ಮಹಿಳೆಯರು (ಪ್ರಯಾಣ ಸಂಖ್ಯೆ) ಉಚಿತ ಪ್ರಯಾಣ ಸೌಲಭ್ಯದ ಸದುಪಯೋಗ ಪಡೆದಿದ್ದು, ಇದಕ್ಕಾಗಿ ಸರ್ಕಾರ 1,472 ಕೋಟಿ ರೂ. ವೆಚ್ಚ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಳೆದ ತಿಂಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು.

    ಇದನ್ನೂ ಓದಿ: ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!

    ಆದರೆ ಈ ಯೋಜನೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆಯೇ ಎಂಬ ಅನುಮಾನ ಈಗ ಮೂಡಿದೆ. ಅಲ್ಲದೆ ಅದಕ್ಕೆ ಪುಷ್ಟಿ ನೀಡುವಂತ ವಿಡಿಯೋವೊಂದು ಹರಿದಾಡುತ್ತಿದ್ದು, ಸರ್ಕಾರಿ ಯೋಜನೆಯೊಂದರಲ್ಲಿ ಮೋಸ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

    ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ನಲ್ಲಿ ಕಂಡಕ್ಟರ್ ಒಬ್ಬರು ಸುಮ್ಮನೆ ಟಿಕೆಟ್ ಹರಿದು ಬಿಸಾಕುತ್ತಿರುವುದು ಕಂಡುಬಂದಿದ್ದು, ಇದನ್ನು ಯುವತಿಯೊಬ್ಬರು ತಮ್ಮ ಮೊಬೈಲ್​​ಫೋನ್​ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ.

    ಇದನ್ನೂ ಓದಿ: ಪ್ರೀತಿ ಇದ್ದರೂ ಪತ್ನಿ ಯಾಕೆ ಪತಿಯಿಂದ ವಿಮುಖಳಾಗುತ್ತಾಳೆ?; ಇದು ವಿವಾಹಿತರಿಗೊಂದು ಕಿವಿಮಾತು, ಎಚ್ಚರಿಕೆ ಕೂಡ!

    ಮಾತ್ರವಲ್ಲ, ಟಿಕೆಟ್ ಹರಿದು ಎಸೆಯುತ್ತಿರುವುದೇಕೆ? ಎಂದು ಸಂಬಂಧಿತ ನಿರ್ವಾಹಕರನ್ನು ವಿಡಿಯೋ ಮಾಡುತ್ತಲೇ ಪ್ರಶ್ನೆ ಮಾಡಿದ್ದಾರೆ. ಈ ಪ್ರಶ್ನೆಗೆ ತಕ್ಷಣ ಉತ್ತರ ಕೊಡಲಾಗದೆ ಪೆಚ್ಚಾದ ನಿರ್ವಾಹಕ Sorry ಕೇಳಿದ್ದು, ಭ್ರಷ್ಟಾಚಾರದ ಅನುಮಾನವನ್ನು ಬಲವಾಗಿಸಿದೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದರ ಸತ್ಯಾಸತ್ಯತೆ ಕುರಿತ ಖಚಿತ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.

    ಆಧಾರ್ ಥರವೇ ಬರಲಿದೆ ಅಪಾರ್: ಒಂದು ದೇಶ ಒಂದು ಐಡಿ; ಇದು ಯಾರಿಗೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts