More

    ಮೆಕ್ಕೆಜೋಳಕ್ಕೆ ಸಿಗದ ಬೆಂಬಲ ಬೆಲೆ

    ಹುಬ್ಬಳ್ಳಿ: ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ತಂದರೂ ರೈತರು ಬೆಳೆದ ಆಹಾರ ಉತ್ಪನ್ನಗಳಿಗೆ ಬೆಲೆ ಸಿಗುತ್ತಿಲ್ಲ. ಮೆಕ್ಕೆಜೋಳದ ಸ್ಥಿತಿಯಂತೂ ಶೋಚನೀಯವಾಗಿದೆ. ರೈತರು ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಮೆಕ್ಕೆಜೋಳ ಮಾರಾಟ ಮಾಡುವ ಸ್ಥಿತಿ ಬಂದಿದೆ.

    ಸರ್ಕಾರ ಮೆಕ್ಕೆಜೋಳಕ್ಕೆ 1,850 ರೂ. ಬೆಂಬಲ ಬೆಲೆ ಘೊಷಿಸಿದೆ. ಆದರೆ, ಮಾರುಕಟ್ಟೆಯಲ್ಲಿ ಕ್ವಿಂಟಾಲ್​ಗೆ 1000 ರೂ.ಗಳಿಂದ 1350 ರೂ.ಗೆ ಖರೀದಿ ನಡೆದಿದೆ. ಸ್ಪರ್ಧಾತ್ಮಕ ಮಾರುಕಟ್ಟೆ ಹಾಗೂ ಖರೀದಿದಾರರು ಇಲ್ಲದೆ ಇರುವುದರಿಂದ ರೈತರು ಬೆಂಬಲ ಬೆಲೆಗಿಂತ 500-550 ರೂ.ನಷ್ಟು ಕಡಿಮೆ ದರಕ್ಕೆ ಮೆಕ್ಕೆಜೋಳ ಮಾರಾಟ ಮಾಡುತ್ತಿದ್ದಾರೆ. ರೈತರು ಇನ್ಮುಂದೆ ಮಾರುಕಟ್ಟೆಯ ಹೊರಗೂ ಮಾರಾಟ ಮಾಡಿ ಲಾಭ ಗಳಿಸಬಹುದು ಎಂದು ಭರವಸೆ ನೀಡಿದ್ದ ಸರ್ಕಾರ, ಜನಪ್ರತಿನಿಧಿಗಳು ಈಗ ತಮಗಾಗುತ್ತಿರುವ ಅನ್ಯಾಯದ ಬಗ್ಗೆ ಚಕಾರವೆತ್ತುತ್ತಿಲ್ಲ ಎಂಬ ನೋವು ರೈತರನ್ನು ಬಾಧಿಸತೊಡಗಿದೆ.

    ಲಾಕ್​ಡೌನ್ ಎಫೆಕ್ಟ್: ಕರೊನಾ ಲಾಕ್​ಡೌನ್ ಪರಿಣಾಮ ಮೆಕ್ಕೆಜೋಳದ ಮೌಲ್ಯವರ್ಧನೆ ಮಾಡುವ ಘಟಕಗಳು ಬಹುತೇಕ ಸ್ಥಗಿತಗೊಂಡಿವೆ. ಉಪ ಉತ್ಪನ್ನಗಳಿಗೆ ಬೇಡಿಕೆ ಕುಸಿದಿದೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ ಧಾರಣೆ ಕಡಿಮೆಯಾಗಿದೆ. ಅಲ್ಲದೆ, ಕಳೆದ ವರ್ಷ ಖರೀದಿಸಿದ ಮೆಕ್ಕೆಜೋಳದ ಸಂಗ್ರಹದಲ್ಲಿ ಒಂದಿಷ್ಟು ಹಾಗೆಯೇ ಉಳಿದಿದ್ದು, ಹೊಸ ಮೆಕ್ಕೆಜೋಳ ಖರೀದಿಸಲು ಉದ್ದಿಮೆಗಳು ಮುಂದಾಗುತ್ತಿಲ್ಲ. ಹೀಗಾಗಿ ಬೆಲೆ ಕುಸಿದಿದೆ ಎನ್ನುತ್ತಾರೆ ಖರೀದಿದಾರರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts