18.5 C
Bangalore
Monday, December 16, 2019

ಪ್ರತಿಭಟನೆಗಳಿಗೆ ದುಬಾರಿ ದರ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

< 10 ಜನರ ಮೌನ ಪ್ರತಿಭಟನೆಗೆ 500 ರೂ. ಶುಲ್ಕ * ವ್ಯಾಪಕ ಆಕ್ರೋಶ>

ಮಂಗಳೂರು: ಬೇಡಿಕೆ, ಅನ್ಯಾಯ, ಹಕ್ಕುಗಳಿಗಾಗಿ ಹೋರಾಟದ ಮೂಲಕ ಸಂಬಂಧಪಟ್ಟವರನ್ನು ಎಚ್ಚರಿಸಲು ಸಂತ್ರಸ್ತರಿಗೆ ಸಂವಿಧಾನ ಅವಕಾಶ ಕಲ್ಪಿಸಿದೆ. ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ದುಬಾರಿ ದರ ವಿಧಿಸುವ ಮೂಲಕ ಹೋರಾಟಗಳನ್ನು ಹತ್ತಿಕ್ಕಲು ಮುಂದಾಗಿದೆ.

ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಆದೇಶದ ಪ್ರಕಾರ ಧ್ವನಿವರ್ಧಕ ಇಲ್ಲದೆ, ಸಾಂಕೇತಿಕವಾಗಿ 10 ಜನ ಮೌನ ಪ್ರತಿಭಟನೆ ಮಾಡಬೇಕಿದ್ದರೂ ಸ್ಥಳೀಯ ಪೊಲೀಸ್ ಠಾಣೆಯಲ್ಲಿ 500 ರೂ. ಪಾವತಿಸಿ ಅನುಮತಿ ಪಡೆಯಬೇಕು. ಸರ್ಕಾರದ ಈ ಆದೇಶಕ್ಕೆ ಹೋರಾಟಗಾರರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಧ್ವನಿವರ್ಧಕ ಬಳಸಿ ಮೆರವಣಿಗೆ ಮಾಡುವುದಾದರೆ ಅದರಲ್ಲಿ ಭಾಗವಹಿಸುವ ಜನರ ಸಂಖ್ಯೆಗೆ ಅನುಗುಣವಾಗಿ ದರ ಪಾವತಿಸಬೇಕು. 10 ಸಾವಿರದಿಂದ ಲಕ್ಷಕ್ಕಿಂತಲೂ ಅಧಿಕ ರೂ. ಪಾವತಿಸಬೇಕು. ಧ್ವನಿವರ್ಧಕ ಒಂದು ದಿನಕ್ಕೆ 75 ರೂ., 30 ದಿನಗಳ ತನಕ ದಿನಕ್ಕೆ 15 ರೂ, ತಿಂಗಳಿಗೆ 450 ರೂ, ಶಾಂತಿಯುತ ಸಭೆ ಮತ್ತು ಮೆರವಣಿಗೆಗೆ 500 ರೂ. ಪಾವತಿಸಿ ಪ್ರತಿಭಟನೆ ನಡೆಯುವ ವ್ಯಾಪ್ತಿಯಲ್ಲಿರುವ ಪೊಲೀಸ್ ಠಾಣೆಯಿಂದ ಅನುಮತಿ ಪಡೆಯಬೇಕು.

ರಾಜ್ಯದಲ್ಲಿ ನಡೆಯುತ್ತಿರುವ ರೆಸಾರ್ಟ್ ರಾಜಕೀಯ ಖಂಡಿಸಿ, ಜಿಲ್ಲೆಯ ಶಾಸಕರು ಸಾರ್ವಜನಿಕರ ಭೇಟಿಗೆ ಸಿಗದೇ ಇರುವುದನ್ನು ವಿರೋಧಿಸಿ ಡಿವೈಎಫ್‌ಐ ಜಿಲ್ಲಾ ಸಮಿತಿ ಗುರುವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಧ್ವನಿವರ್ಧಕ ಇಲ್ಲದೆ ಶಾಂತಿಯುತ ಸಾಂಕೇತಿಕ ಪ್ರತಿಭಟನೆ ಆಯೋಜಿಸಿತ್ತು. 50 ಮಂದಿ ಇದರಲ್ಲಿ ಭಾಗವಹಿಸಿದ್ದರು. ಇದಕ್ಕೆ ಪೊಲೀಸರು 500 ರೂ. ಶುಲ್ಕ ವಸೂಲಿ ಮಾಡಿ, ರಶೀದಿ ನೀಡಿದ್ದಾರೆ.
ಹೆಚ್ಚಿನ ಪ್ರತಿಭಟನೆಗಳು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತವೆ. ಪಾಂಡೇಶ್ವರ ಠಾಣಾ ವ್ಯಾಪ್ತಿಗೆ ಬರುವುದರಿಂದ ಇಲ್ಲಿನ ಪೊಲೀಸರ ಸಮಯ, ಪ್ರತಿಭಟನೆಗೆ ಬಂದೋಬಸ್ತ್ ವಹಿಸುವುದರಲ್ಲೇ ಕಳೆಯುತ್ತಿದೆ. ಹಾಗಾಗಿ ಇತರ ಪ್ರಕರಣಗಳ ತನಿಖೆಗೆ ತೊಡಕಾಗುತ್ತಿದೆ. ಸಾರ್ವಜನಿಕವಾಗಿ 5 ಅಥವಾ 10 ಜನರು ಶಾಂತಿಯುತವಾಗಿ, ಧ್ವನಿವರ್ಧಕ ಬಳಸದೆ ಪ್ರತಿಭಟನೆ ನಡೆಸುವುದಿದ್ದರೂ ಪೊಲೀಸ್ ಠಾಣೆಯಿಂದ ಅನುಮತಿ ಕಡ್ಡಾಯ. ಕೆಲ ಸಂಘಟನೆಯವರು ಪೊಲೀಸ್ ಬಂದೋಬಸ್ತ್ ಬೇಡ ಎನ್ನುತ್ತಿದ್ದಾರೆ. ಬಂದೋಬಸ್ತ್ ಕಲ್ಪಿಸುವುದು ಪೊಲೀಸರ ಕರ್ತವ್ಯ. ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿ ಏನಾದರೂ ಅಶಾಂತಿ ಉಂಟಾದರೆ ಪ್ರತಿಭಟನಾಕಾರರನ್ನೇ ಹೊಣೆ ಮಾಡಬೇಕಾಗುತ್ತದೆ ಎಂಬುದು ಪೊಲೀಸರ ಹೇಳಿಕೆ.

ಸರ್ಕಾರ ಪ್ರತಿಭಟನೆಗಳಿಗೆ ಅಧಿಕ ದರ ವಿಧಿಸಿರುವುದು ಖಂಡನೀಯ. ಜನತೆಯ, ಜನಪರ ಚಳವಳಿಗಳ ಕತ್ತು ಹಿಸುಕುವ ಕ್ರಮ. ಜನವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಕಾನೂನು ಜಾರಿ ಮಾಡಿರುವುದನ್ನು ನಾಡಿನ ಜನತೆ ಒಕ್ಕೊರಲಿನಿಂದ ಪ್ರಶ್ನಿಸಬೇಕಾಗಿದೆ.
| ಮುನೀರ್ ಕಾಟಿಪಳ್ಳ ಹೋರಾಟಗಾರ

ಪ್ರತಿಭಟನೆ, ಮೆರವಣಿಗೆ ನಡೆಸುವವರಿಗೆ ಸರ್ಕಾರ ದರ ನಿಗದಿ ಮಾಡಿರುವುದು ಶ್ಲಾಘನೀಯ. ಮೆರವಣಿಗೆ ಸಂದರ್ಭ ನಗರಗಳಲ್ಲಿ ಸಂಚಾರದಲ್ಲಿ ಉಂಟಾಗುವ ಅಡಚಣೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸಬೇಕಾಗುತ್ತದೆ. ಪೊಲೀಸರು ಇದಕ್ಕೆ ಬಂದೋಬಸ್ತ್ ವಹಿಸಬೇಕಾದ ಕಾರಣ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ.
|ಹರಿಪ್ರಸಾದ್, ಖಾಸಗಿ ಉದ್ಯೋಗಿ

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...