More

    ಪಿಥೋರಗಢ ಮೇಘಸ್ಫೋಟ: ಮೂರು ಸಾವು ಆರು ಜನ ನಾಪತ್ತೆ

    ಪಿಥೋರಗಢ: ಮುನ್ಸಿಯಾರಿ ಪ್ರದೇಶದಲ್ಲಿ ಮೇಘಸ್ಫೋಟ ಮತ್ತು ಭಾರಿ ಮಳೆಯಿಂದಾಗಿ ಹಾನಿ ಸಂಭವಿಸಿ, ಮೂವರು ಮೃತಪಟ್ಟಿದ್ದು, ಆರು ಮಂದಿ ನಾಪತ್ತೆಯಾಗಿದ್ದಾರೆ.
    ಭಾನುವಾರ ರಾತ್ರಿ ಮಡ್ಖೋಟ್ ಪ್ರದೇಶದ ತಂಗಾ ಗ್ರಾಮದಲ್ಲಿ ಸಂಭವಿಸಿದ ಈ ಪ್ರಕೃತಿ ವಿಕೋಪ ಘಟನೆಯಲ್ಲಿ ಈವರೆಗೆ ಇಬ್ಬರನ್ನು ರಕ್ಷಿಸಲಾಗಿದೆ.
    ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಅಲ್ಲಲ್ಲಿ ಕಾಣೆಯಾದವರನ್ನು ಹುಡುಕುತ್ತಿದ್ದಾರೆ. ರಾಜ್ಯ ವಿಪತ್ತು ನಿರ್ವಹಣೆ ಪಡೆ (ಎಸ್‌ಡಿಆರ್‌ಎಫ್) ಮತ್ತು ಇತರ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಸ್ಥಳೀಯ ಹೀರಾ ಸಿಂಗ್ ಹೇಳಿದ್ದಾರೆ.

    ಇದನ್ನೂ ಓದಿ:  VIDEO ] ಕೋವಿಡ್ ವಿರುದ್ಧ ಜಾಗೃತಿ ಮೂಡಿಸಲು ಈತ ಮಾಡಿದ ಸೃಜನಶೀಲ ತಂತ್ರ ಇದು..

    ಭಾನುವಾರ, ಈ ಪ್ರದೇಶದಲ್ಲಿ ನಿರಂತರ ಮಳೆಯಾದ ಕಾರಣ ಪಿಥೋರಗಢ-ಮುನ್ಸಿಯಾರಿ ರಸ್ತೆಯ ಮಡ್ಖೋಟ್​ದಲ್ಲಿ ಸೇತುವೆಯ ಒಂದು ಭಾಗ ಕುಸಿದಿದೆ.
    ಚೋರಿಬಗರ್ ಗ್ರಾಮದಲ್ಲಿ ಐದು ಮನೆಗಳು ಕುಸಿದಿದ್ದು, ಜಾನುವಾರುಗಳು ಕೊಚ್ಚಿಕೊಂಡು ಹೋಗಿವೆ. ಗೋರಿ ನದಿಯೂ ಉಕ್ಕಿ ಹರಿದಿದೆ.
    ಮುಂದಿನ ಮೂರು ದಿನಗಳಲ್ಲಿ ಉತ್ತರಾಖಂಡ ಮತ್ತು ಇತರ ಉತ್ತರದ ರಾಜ್ಯಗಳ ಮೇಲೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಮುನ್ಸೂಚನೆ ನೀಡಿದೆ.

    ‘ಜೊತೆ ಜೊತೆಯಲಿ’ ಧಾರಾವಾಹಿ ನಿರ್ದೇಶಕ ಆರೂರು ಜಗದೀಶ್ ಮಣಿಪಾಲ್ ಆಸ್ಪತ್ರೆಗೆ ದಾಖಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts