ವಿಧಾನಪರಿಷತ್ ಉಪಸಭಾಪತಿ ಧರ್ಮೇಗೌಡ ನಿಧನ: ಸಂತಾಪ ಸೂಚಿಸಿದ ಮುಖ್ಯಮಂತ್ರಿ ಮತ್ತು ಇತರೆ ಗಣ್ಯರು

S-L-Dharme-Gowda 1
Published on

ಬೆಂಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಮತ್ತು ಇತರೆ ಗಣ್ಯರು ತೀವ್ರ. ಸಂತಾಪ ವ್ಯಕ್ತಪಡಿಸಿದ್ದಾರೆ.

ಎಸ್. ಎಲ್ . ಧರ್ಮೇಗೌಡ ಅವರ ಅಕಾಲಿಕ ನಿಧನ ಅತ್ಯಂತ ದುರದೃಷ್ಟಕರ ಹಾಗೂ ತೀವ್ರ ಆಘಾತ ತಂದಿದೆ. ವಿಧಾನ ಪರಿಷತ್ ಸದಸ್ಯರಾಗಿ, ಉಪ ಸಭಾಪತಿಯಾಗಿ ಅವರ ಕಾರ್ಯ ವೈಖರಿ ಅತ್ಯುತ್ತಮವಾಗಿತ್ತು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಮರಿಸಿಕೊಂಡಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಈ ಆಘಾತವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಚಿಕ್ಕಮಗಳೂರಿಗೆ ತೆರಳಲಿರುವ ಸಿಎಂ ಯಡಿಯೂರಪ್ಪ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ಧರ್ಮೇಗೌಡರ ಅಂತಿಮ ದರ್ಶನ ಪಡೆದು, ಗೌರವ ಸಲ್ಲಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net