More

    ಪಿಡಿಒ ವರ್ಗಾವಣೆಗೂ ಕೌನ್ಸೆಲಿಂಗ್

    ಬೆಂಗಳೂರು: ಶಿಕ್ಷಣ, ಆರೋಗ್ಯ ಇಲಾಖೆಯ ವರ್ಗಾವಣೆಯಲ್ಲಿ ಪಾರದರ್ಶಕತೆ ತರಲು ಕೌನ್ಸೆಲಿಂಗ್ ವ್ಯವಸ್ಥೆ ಇರುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲೂ ಅದೇ ಪದ್ಧತಿ ಜಾರಿಗೆ ತರಲು ತಯಾರಿ ನಡೆದಿದೆ.
    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತನ್ನ ನೌಕರರ ವರ್ಗಾವಣೆಗಳಿಗಾಗಿ ಮೊದಲ ಬಾರಿಗೆ ಹೊಸತನವನ್ನು ತುಂಬಿಕೊಳ್ಳಲಿದೆ. 2024-25ನೆ ಸಾಲಿನಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಇಲಾಖೆಯ ನೌಕರರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ಸೇವಾ ನಿಯಮಗಳನ್ನು ರೂಪಿಸುತ್ತಿದೆ.
    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಇಲಾಖೆಯ ಅಧಿಕಾರಿಗಳೊಂದಿಗೆ ಶನಿವಾರ ಪೂರ್ವಭಾವಿ ಸಭೆ ನಡೆಸಿ ಹಲವಾರು ಸಲಹೆ ಸೂಚನೆ ನೀಡಿದರು.
    ನೌಕರರ ಹಾಗೂ ಸರ್ಕಾರದ ಹಿತದೃಷ್ಟಿಯನ್ನು ಇರಿಸಿಕೊಂಡು ಕೌನ್ಸೆಲಿಂಗ್ ಮಾದರಿ ವರ್ಗಾವಣೆಗಳನ್ನು ಮುಂದಿನ ಆರ್ಥಿಕ ವರ್ಷದಿಂದ ಜಾರಿಗೊಳಿಸಲಾಗುವುದು, ಪಂಚಾಯತಿ ಮಟ್ಟದಲ್ಲಿ ಅಧಿಕಾರಿಗಳು ಹಾಗೂ ನೌಕರರು ಸೇವಾಮನೋಭಾವದಿಂದ ಗ್ರಾಮೀಣ ಜನರಿಗೆ ನೆರವಾಗಬೇಕೆಂಬುದು ತಮ್ಮ ಆದ್ಯತೆಯಾಗಿದೆ ಎಂದು ಸಚಿವರು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts