'ಟೋಬಿ' ಟ್ರೇಲರ್​ಗೆ ಕ್ಷಣಗಣನೆ ಆರಂಭ; ರಿಲೀಸ್​ ಮಾಡಲು ಯಾರೆಲ್ಲಾ ಆಗಮಿಸಲಿದ್ದಾರೆ?

Untitled design - 2023-08-03T180247.607
Published on

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ನಿರ್ದೇಶಕ, ಬರಹಗಾರ ರಾಜ್​ ಬಿ.ಶೆಟ್ಟಿ ನಟನೆಯ ಬಹುನಿರೀಕ್ಷಿತ ಚಿತ್ರ 'ಟೋಬಿ' ಟ್ರೇಲರ್​ ರಿಲೀಸ್​ಗೆ ಇದೀಗ ಕ್ಷಣಗಣನೆ ಆರಂಭಗೊಂಡಿದ್ದು, ಆಗಸ್ಟ್​ 04 ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ಬಿಡುಗಡೆಗೊಳ್ಳಲು ಸಜ್ಜಾಗಿದೆ.

ನಾಳೆ ಸಂಜೆ 6.30ಕ್ಕೆ ಬೆಂಗಳೂರಿನ ಹೊಸಕೆರೆಹಳ್ಳಿಯ ನಂದಿ ಲಿಂಕ್ಸ್ ಗ್ರೌಂಡ್​​ನಲ್ಲಿ 'ಟೋಬಿ' ಚಿತ್ರದ ಟ್ರೇಲರ್​ ಅಧಿಕೃತವಾಗಿ ಲಾಂಚ್ ಆಗಲಿದೆ. ಬಸಿಲ್​ ಅಲ್ಚಲಕ್ಕಲ್ ನಿರ್ದೇಶನದ ಚಿತ್ರದಲ್ಲಿ ರಾಜ್ ಬಿ.ಶೆಟ್ಟಿ, ಸಂಯುಕ್ತ ಹೊರನಾಡು, ಚೈತ್ರಾ ಜೆ.ಆಚಾರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ಚಿತ್ರದ ಟ್ರೇಲರ್ ಬಿಡುಗಡೆಗೆ ಸಿಂಪಲ್​ ಸ್ಟಾರ್​ ರಕ್ಷಿತ್ ಶೆಟ್ಟಿ, ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net