More

    ದೇಶ ಬಹಳ ಸಂಕಷ್ಟದ ಸಮಯ ಎದುರಿಸುತ್ತಿದ್ದು, ಸಿಎಎ ಕುರಿತ ತುರ್ತು ವಿಚಾರಣೆ ಈಗ ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್​

    ನವದೆಹಲಿ: ದೇಶ ಈಗ ಬಹಳ ಸಂಕಷ್ಟದ ಸಮಯವನ್ನು ಎದುರಿಸುತ್ತಿದೆ.ಹಿಂಸಾಚಾರಗಳು ನಡೆಯುತ್ತಿದ್ದು, ಇಂತಹ ಸನ್ನಿವೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ತುರ್ತು ವಿಚಾರಣೆ ಕೈಗೆತ್ತಿಕೊಳ್ಳುವುದು ಸಾಧ್ಯವಾಗದು ಎಂದು ಸುಪ್ರೀಂ ಕೋರ್ಟ್​ ಗುರುವಾರ ಸ್ಪಷ್ಟಪಡಿಸಿದೆ.

    ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೊಬ್ಡೆ, ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಸೂರ್ಯಕಾಂತ್​ ಅವರನ್ನು ಒಳಗೊಂಡ ನ್ಯಾಯಪೀಠ ಸಿಎಎ ಕುರಿತ ಅರ್ಜಿಗಳ ವಿಚಾರಣೆಯನ್ನು ನಡೆಸುತ್ತಿದ್ದು, ಕಾಯಿದೆಯೊಂದು ಸಾಂವಿಧಾನಿಕ ಎಂದು ಘೋಷಿಸಲು ಅರ್ಜಿ ಸಲ್ಲಿಸುತ್ತಿರುವುದನ್ನು ಇದೇ ಮೊದಲ ಬಾರಿ ನೋಡುತ್ತಿದ್ದೇವೆ ಎಂದು ಅಚ್ಚರಿ ವ್ಯಕ್ತಪಡಿಸಿದೆ.

    ದೇಶದಲ್ಲಿ ಶಾಂತಿ ನೆಲೆಸಬೇಕು ಎಂಬುದು ನಮ್ಮ ಆಶಯ. ಅಲ್ಲದೆ, ಕಾನೂನಿನ ವ್ಯಾಲಿಡಿಟಿಯನ್ನಷ್ಟೇ ಕೋರ್ಟ್ ನಿರ್ಣಯಿಸಬಲ್ಲದೇ ಹೊರತು, ಅದು ಸಾಂವಿಧಾನಿಕ ಎಂದು ಘೋಷಿಸುವುದು ಕೋರ್ಟ್​ನ ಕೆಲಸವಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

    ಸಿಎಎಯ ವ್ಯಾಲಿಡಿಟಿಯನ್ನು ಪ್ರಶ್ನಿಸಿ ಅನೇಕ ಅರ್ಜಿಗಳು ಕೋರ್ಟ್​ಗೆ ಸಲ್ಲಿಕೆಯಾಗಿದ್ದು, ಇದಕ್ಕೆ ಪ್ರತಿಯಾಗಿ ಅಡ್ವೊಕೇಟ್ ವಿನೀತ್ ಧಂಡ ಸಲ್ಲಿಸಿರುವ ಅರ್ಜಿಯಲ್ಲಿ ಸಿಎಎ ಯನ್ನು ಸಾಂವಿಧಾನಿಕ ಎಂದು ಘೋಷಿಸಬೇಕು ಮತ್ತು ಇದನ್ನು ಎಲ್ಲ ರಾಜ್ಯಗಳೂ ಅನುಷ್ಠಾನಗೊಳಿಸುವಂತೆ ನಿರ್ದೇಶಿಸಬೇಕು.ಅಲ್ಲದೆ, ಈ ಬಗ್ಗೆ ವದಂತಿಗಳನ್ನು, ರೂಮರ್​ಗಳನ್ನು ಹರಡುವ ವ್ಯಕ್ತಿ, ಸಂಸ್ಥೆ, ಮಾಧ್ಯಮಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts