ದಂಪತಿಗೆ ಸೋಂಕು; ಕ್ವಾರಂಟೈನ್ ಕೇಂದ್ರದಲ್ಲೇ ವಿವಾಹ‌ ವಾರ್ಷಿಕೋತ್ಸವ!

Couple
Published on

ದಾವಣಗೆರೆ: ಕೋವಿಡ್ ಸೋಂಕಿಗೆ ಒಳಗಾಗಿರುವ ಪತಿ-ಪತ್ನಿ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದು, ಕ್ವಾರಂಟೈನ್​ ಕೇಂದ್ರದಲ್ಲೇ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

ದಾವಣಗೆರೆಯ ಬಾಪೂಜಿ ಆಸ್ಪತ್ರೆಯ ಕ್ವಾರಂಟೈನ್ ಕೇಂದ್ರದಲ್ಲಿ ಈ ಅಪರೂಪದ ವಿವಾಹ ವಾರ್ಷಿಕೋತ್ಸವ ನಡೆದಿದೆ. ದಾವಣಗೆರೆ ಸ್ಮಾರ್ಟ್‌ಸಿಟಿ‌ ಯೋಜನೆಯ (ಐಡೆಕ್) ಟೀಮ್ ಲೀಡರ್ ಉಮಾಪತಿ ಹೊಂಬಣ್ಣ ಹಾಗೂ ಅವರ ಪತ್ನಿ ಮಧುಮತಿ ಈ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.

ಮೂರು ದಿನಗಳ ಹಿಂದೆ ಇವರಲ್ಲಿ ಕೋವಿಡ್​ ಪಾಸಿಟಿವ್​ ದೃಢಪಟ್ಟಿದ್ದು, ಬಾಪೂಜಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಯೇ ಕ್ವಾರಂಟೈನ್​ಗೆ ಒಳಗಾಗಿದ್ದ ಇವರು, ತಮ್ಮ 28ನೇ ವಿವಾಹ ವಾರ್ಷಿಕೋತ್ಸವವನ್ನು ಕೇಕ್ ಕತ್ತರಿಸಿ ಆಚರಿಸಿಕೊಂಡಿದ್ದಾರೆ. ಮ್ಯಾರೇಜ್​ ಆ್ಯನಿವರ್ಸರಿ ಪ್ರಯುಕ್ತ ಕ್ವಾರಂಟೈನ್ ಕೇಂದ್ರದಲ್ಲಿದ್ದವರಿಗೆ ಸಿಹಿ‌ ಹಂಚಿ ಸಂಭ್ರಮವನ್ನೂ ಪಟ್ಟಿದ್ದಾರೆ. ಅಲ್ಲದೆ ಕರೊನಾ ನಿಯಂತ್ರಣಕ್ಕಾಗಿ‌ ಹಗಲಿರುಳು ಶ್ರಮಿಸುತ್ತಿರುವ ಕೋವಿಡ್ ವಾರಿಯರ್ಸ್​​ಗೆ ದಂಪತಿ ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net