

ನವದೆಹಲಿ: ಇತ್ತೀಚಿನ ದಿನಗಳಲ್ಲಿ ನಾವು ಸಾರ್ವಜನಿಕ ಸ್ಥಳ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಅನುಚಿತವಾಗಿ ವರ್ತಿಸುತ್ತಿರುವವರನ್ನು ನಾವು ನೋಡಿರುತ್ತೇವೆ ಹಾಗೂ ಕೇಳಿರುತ್ತೇವೆ.
ಇದೀಗ ದೆಹಲಿ ಮೆಟ್ರೋದಲ್ಲಿ ಅದೇ ರೀತಿಯ ಘಟನೆಯೊಂದು ನಡೆದಿದ್ದು ನೆಟ್ಟಿಗರನ್ನು ಕೆರಳಿಸಿ ಕಣ್ಣು ಕೆಂಪಾಗಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ಹೊರಹಾಕಲಾಗುತ್ತಿದೆ.
ದೆಹಲಿ ಮೆಟ್ರೋದಲ್ಲಿ ಯುವಕ ಹಾಗೂ ಯುವತಿ ಪ್ರಣಯ ಪ್ರಸಂಗದಲ್ಲಿ ತೊಡಗಿದ್ದು ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಜನನಿಬಿಡ ಸ್ಥಳದಲ್ಲಿ ಜೋಡಿಗಳಿಬ್ಬರು ಮೆಟ್ರೋ ರೈಲಿನ ಬೋಗಿಯ ನೆಲದಲ್ಲಿ ಕುಳಿತು ಚುಂಬಿಸುತ್ತಿರುವುದು ಕಂಡು ಬರುತ್ತದೆ. ಈ ರೀತಿ ವರ್ತಿಸುತ್ತಿರುವುದನ್ನು ಖಂಡಿಸಿರುವ ನೆಟ್ಟಿಗರು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದ್ದು ನೆಟ್ಟಿಗರು ದೆಹಲಿ ಮೆಟ್ರೋದ ಹೆಸರನ್ನು ಬದಲಾಯಿಸುವಂತೆ ಆಗ್ರಹಿಸಿದ್ದಾರೆ.
ಇನ್ನು ಕೆಲವರು ಜನರು ಇದನ್ನೂ ನೋಡಿ ಯಾಕೆ ಸುಮ್ಮನಿದ್ದಾರೆ. ಇದು ನಿಜವಾದ ಪ್ರೀತಿಯೇ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲು ಮಾಡಲಾದ ವಿಡಿಯೋನಾ ಎಂದು ಪ್ರಶ್ನಿಸಿದ್ದಾರೆ.
ವಿಡಿಯೋ ಕುರಿತು ದೆಹಲಿ ಮೆಟ್ರೋ ಅಧಿಕಾರಿಗಳು ಪ್ರತ್ರಿಕ್ರಿಯಿಸಿಲ್ಲ ಮತ್ತು ಪ್ರೇಮಿಗಳಿಬ್ಬರ ವಿರುದ್ಧ ಕಠಿಣ ಕ್ರಮ ಜರುಗಿಸುವ ನಿರೀಕ್ಷೆ ಇದೆ.