ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!

ಭರಮಸಾಗರ: ಪುತ್ರಿಯನ್ನು ಅಮೆರಿಕಕ್ಕೆ ಕಳುಹಿಸಿ ಮರಳುತ್ತಿದ್ದ ದಂಪತಿ, ಮಾರ್ಗಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಕಸವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಈ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದದಲ್ಲಿ ದಾವಣಗೆರೆಯ ನಿವೃತ್ತ ಅಬಕಾರಿ ಅಧಿಕಾರಿ ಜಯರಾಂ ನಾಯ್ಕ್ (73), ಇವರ ಪತ್ನಿ ಹೇಮಾವತಿಬಾಯಿ (65) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರಿಗೆ ಇಬ್ಬರು ಪುತ್ರಿಯರಿದ್ದು, ಆ ಪೈಕಿ ಮೊದಲನೆಯವಳು ಬೆಂಗಳೂರಿನಲ್ಲಿ ವೈದ್ಯೆಯಾಗಿದ್ದು, ಎರಡನೆಯವಳನ್ನು ಅಮೆರಿಕಕ್ಕೆ ಕಳುಹಿಸಿದ್ದರು. ಇದನ್ನೂ ಓದಿ: ಶಾಲೆಯ ನಲಿ-ಕಲಿ ಕ್ಲಾಸ್​​ನಲ್ಲಿ ಹಾವು; … Continue reading ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!