

ಗುಜರಾತ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ನದಿಯಲ್ಲಿ ಹಠಾತ್ ಪ್ರವಾಹದಲ್ಲಿ ಸಿಲುಕಿರುವ ಘಟನೆ ಸಬರಕಾಂತ ಜಿಲ್ಲೆಯಲ್ಲಿ ನಡೆದಿದೆ.
ಈ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನದಿಯಲ್ಲಿ ಹಠಾತ್ ನೀರಿನ ಹರಿವು ಹೆಚ್ಚಾದ ಕಾರಣ, ಕಾರು ನೀರಿನಲ್ಲಿ ಮುಳುಗಿತು. ದಂಪತಿ ಪ್ರಾಣಾಪಾಯದಿಂದ ಪಾರಾಗಿ ಹೊರಗೆ ಬಂದಿದ್ದಾರೆ.
ಗುಜರಾತಿನ ಸಬರಕಾಂತ ಜಿಲ್ಲೆಯಲ್ಲಿ ದಂಪತಿ ಕಾರಿನಲ್ಲಿ ಹೋಗುತ್ತಿದ್ದರು. ನದಿಯ ಮೂಲಕ ಸಾಗುವಾಗ ನೀರಿನ ಹರಿವು ಹೆಚ್ಚಾದಾಗ ವಾಹನ ಎಳೆಯಲು ಪ್ರಾರಂಭಿಸಿತು. ಜೋರಾದ ನೀರಿನ ರಭಸಕ್ಕೆ ಕಾರು ಕೊಚ್ಚಿ ಹೋಗಿದೆ. ಎಡರ್ ತಾಲೂಕಿನ ವಡಿಯವೀರ ಭೂತಿಯ ಮಧ್ಯ ನದಿಯಲ್ಲಿ ಭಾರೀ ನೀರು ಹರಿದು ಬಂದಿದ್ದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಬಹಳ ಹೊತ್ತು ಪರದಾಡುವಂತಾಯಿತು. ಕಾರಿನಲ್ಲಿದ್ದ ದಂಪತಿ ನೀರಿನಿಂದ ತಪ್ಪಿಸಿಕೊಳ್ಳಲು ಕಾರಿನ ರೂಪ್ ಮೇಲೆ ಹತ್ತಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಯನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನಿಸಿದರು.
ನದಿಯಲ್ಲಿ ನೀರಿನ ಹರಿವು ಜೋರಾಗಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಹಲವು ತೊಂದರೆಗಳು ಉಂಟಾಗಿವೆ. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ತಂಡ ಆಗಮಿಸಿದೆ. ನದಿಯಲ್ಲಿ ನೀರಿನ ಹರಿವು ಕಡಿಮೆಯಾದ ತಕ್ಷಣ ಇಬ್ಬರನ್ನೂ ಹೊರ ತೆಗೆಯಲಾಯಿತು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ರ್ ಆಗಿದೆ.