ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ವಿಚಾರಣೆಯನ್ನು ಆಗಸ್ಟ್ 31ಕ್ಕೆ ಮುಂದೂಡಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಹಿಂದೆ ನೀಡಲಾಗಿದ್ದ ಮಧ್ಯಂತರ ಆದೇಶವನ್ನು ನ್ಯಾಯಾಲಯ ಮುಂದುವರೆಸಲು ಸೂಚಿಸಿದ್ದು, ಪ್ರಕರಣದ ವಿಚಾರಣೆಯನ್ನು ಆಗಸ್ಟ್ 31ಕ್ಕೆ ನಡೆಸುವುದಾಗಿ ತಿಳಿಸಿದೆ.
ಪ್ರಕರಣದ ಮುಂದಿನ ವಿಚಾರಣೆಯನ್ನು ಕೋರ್ಟ್ ಆಗಸ್ಟ್ 31ರ ಬೆಳಗ್ಗೆ 10:30ಕ್ಕೆ ನಡೆಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಮತ್ತೆರಡು ದಿನ ರಿಲೀಫ್ ಸಿಕ್ಕಂತಾಗಿದೆ.
ಇದನ್ನೂ ಓದಿ: ಕೂಲಿಂಗ್ ಗ್ಲಾಸ್ ಧರಿಸಿ ಬಳ್ಳಾರಿ ಜೈಲಿಗೆ ದಾಸ ಎಂಟ್ರಿ; ದರ್ಶನ್ರನ್ನು ಶಿಫ್ಟ್ ಮಾಡಿದ ಅಧಿಕಾರಿಗಳಿಗೆ ಎದುರಾಯ್ತು ಸಂಕಷ್ಟ
ಕೆಲ ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸಿದ್ದಾರೆ, ಆಕ್ಷೇಪಣೆ ಗೆ ನಮ್ಮ ಪ್ರತಿಕ್ರಿಯೆ ಸಲ್ಲಿಸಬೇಕಿದೆ. ರಾಜ್ಯಪಾಲರು ಈಗಲೂ ತಮ್ಮ ಆಕ್ಷೇಪಣೆ ಸಲ್ಲಿಸಿಲ್ಲ. ದೂರುದಾರ ಪ್ರದೀಪ್ ಕುಮಾರ್ ಕೂಡಾ ಆಕ್ಷೇಪಣೆ ಸಲ್ಲಿಸಿಲ್ಲ. ಇಬ್ಬರು ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸುವುದಿಲ್ಲವೆಂದು ದಾಖಲಿಸಿ ಎಂದು ಹೈಕೋರ್ಟ್ಗೆ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಮನವಿ ಮಾಡಿದ್ದಾರೆ. ರಾಜ್ಯಪಾಲರು ಯಾವುದೇ ಆಕ್ಷೇಪಣೆ ಸಲ್ಲಿಸುವುದಿಲ್ಲ, ಅವಶ್ಯವಿದ್ದರೆ ರಾಜ್ಯಪಾಲರು ತಮ್ಮ ಕಡತ ಸಲ್ಲಿಸಲು ಸಿದ್ದರಿದ್ದಾರೆ. ರಾಜ್ಯಪಾಲರ ಆಕ್ಷೇಪಣೆಗೆ ಕಾಯದೇ ವಿಚಾರಣೆ ಮುಂದುವರಿಸಲು ಮನವಿ, ರಾಜ್ಯಪಾಲರ ಪರ ವಕೀಲರಿಂದ ಹೈಕೋರ್ಟ್ಗೆ ಮನವಿ ಮಾಡಲಾಗಿದೆ.
10-15 ವರ್ಷ ಹಳೆಯ ಘಟನೆಗಳಿಗೆ ಈಗಿನ ಕಾನೂನು ಅನ್ವಯಿಸಲಾಗುತ್ತಿದೆ. ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಹೆಚ್ ಡಿ ಕುಮಾರಸ್ವಾಮಿ ಇವರುಗಳ ಆರೋಪಪಟ್ಟಿ ಸಿದ್ದವಾಗಿದ್ದರೂ ರಾಜ್ಯಪಾಲರು ಅನುಮತಿ ನೀಡುತ್ತಿಲ್ಲ. ಡಿನೋಟಿಫಿಕೇಷನ್ಗಾಗಿ ಸಿದ್ದರಾಮಯ್ಯ ಯಾವುದೇ ಪ್ರತಿಫಲ ಪಡೆದಿಲ್ಲ. 2004 ರಲ್ಲಿ ಸಿಎಂ ಮೈದುನನಿಗೆ ಜಮೀನು ವರ್ಗಾವಣೆಯಾಯಿತು,2005 ರಲ್ಲಿ ಭೂಮಿಯನ್ನು ಕೃಷಿಯೇತರ ಪರಿವರ್ತನೆ ಮಾಡಲಾಯಿತು,2010 ರಲ್ಲಿ ಸಿಎಂ ಪತ್ನಿ ಭೂಮಿಯನ್ನು ಖರೀದಿ ಮಾಡಿದರು ಜಮೀನಿಗೆ ಬದಲಿಯಾಗಿ ನಿವೇಶನ ಪಡೆದಿದ್ದಾರೆ… ಇದನ್ನು ದೊಡ್ಡ ಹಗರಣದಂತೆ ಬಿಂಬಿಸಲಾಗುತ್ತಿದೆ ಎಂದು ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದಾರೆ.
ಶನಿವಾರ ವಾದ ಮಂಡಿಸುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ಹೇಳಿದ್ದು, ಆಗಸ್ಟ್ 31ರ ಬೆಳಗ್ಗೆ 10:30ಕ್ಕೆ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಹೇಳಿದ್ದು, ಈ ಹಿಂದಿನ ಮಧ್ಯಂತರ ಆದೇಶ ಮುಂದುವರಿಸುವಂತೆ ಸೂಚಿಸಿದೆ. ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್ಗೂ ನ್ಯಾಯಾಲಯ ಸೂಚನೆ ನೀಡಿದೆ.