ಮೋದಿ ರ‍್ಯಾಲಿ ವೇಳೆ ಸ್ಫೋಟ ಪ್ರಕರಣ; ನಾಲ್ವರು ಆರೋಪಿಗಳ ಮರಣದಂಡನೆ ಶಿಕ್ಷೆಯನ್ನು ಜೀವಾವಧಿಗೆ ಬದಲಿಸಿದ ಪಾಟ್ನಾ ಹೈಕೋರ್ಟ್​!

court

ಪಾಟ್ನಾ: 2013ರ ಪಾಟ್ನಾ ಸರಣಿ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಅಪರಾಧಿಗಳಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆಯನ್ನು ಪಾಟ್ನಾ ಹೈಕೋರ್ಟ್ ಬುಧವಾರ ಜೀವಾವಧಿ ಶಿಕ್ಷೆಗೆ ಪರಿವರ್ತಿಸಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣ: ಸರ್ವೇಗೆ ಜಾಗ ಅಗೆಯಲು ಎಎಸ್‌ಐಗೆ ಅನುಮತಿ ಕೋರಿ ಹಿಂದೂಗಳಿಂದ ಒತ್ತಾಯ

ವಿಶೇಷ ಎನ್‌ಐಎ ನ್ಯಾಯಾಲಯದ ಹಿಂದಿನ ತೀರ್ಪನ್ನು ಪರಿಶೀಲಿಸಿದ ಹೈಕೋರ್ಟ್​ ನ್ಯಾಯಮೂರ್ತಿ ಅಶುತೋಷ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ. ಆರೋಪಿಗಳ ಪರವಾದ ಮಂಡಿಸಿದ ವಕೀಲ ಇಮ್ರಾನ್ ಘನಿ, ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವ ಹೈಕೋರ್ಟ್‌ನ ತೀರ್ಪನ್ನು ದೃಢಪಡಿಸಿದ್ದಾರೆ.

ಅಕ್ಟೋಬರ್ 27, 2013 ರಂದು ಸಂಭವಿಸಿದ ಸರಣಿ ಸ್ಫೋಟಗಳು ವ್ಯಾಪಕ ಭೀತಿಯನ್ನು ಉಂಟುಮಾಡಿತ್ತು. ಹಲವಾರು ಸಾವುನೋವುಗಳಿಗೆ ಕಾರಣವಾಯಿತು. 2014ರ ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಿದ್ದ ನರೇಂದ್ರ ಮೋದಿ ಅವರು ಚುನಾವಣಾ ರ‍್ಯಾಲಿಯಲ್ಲಿ ಮಾತನಾಡುತ್ತಿದ್ದ ವೇಳೆ ಪಾಟ್ನಾದ ಗಾಂಧಿ ಮೈದಾನದಲ್ಲಿ ಸ್ಫೋಟ ಸಂಭವಿಸಿತ್ತು. ಅಲ್ಲದೇ ಪಾಟ್ನಾ ರೈಲು ನಿಲ್ದಾಣವನ್ನು ಗುರಿಯಾಗಿಸಿಕೊಂಡು ಸ್ಫೋಟಗೊಳಿಸಲಾಗಿತ್ತು. ಈ ಸ್ಫೋಟದಿಂದ 6 ಜನ ಸಾವನ್ನಪ್ಪಿದ್ದು, 80ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಮೊದಲ ಬಾಂಬ್ ಸ್ಫೋಟ ಪಾಟ್ನಾ ರೈಲು ನಿಲ್ದಾಣದ 10ನೇ ಫ್ಲಾಟ್‍ಫಾರ್ಮ್‍ನಲ್ಲಿ ಸಂಭವಿಸಿತ್ತು. ಇನ್ನುಳಿದ ಸ್ಫೋಟ ಗಾಂಧಿ ಮೈದಾನದಲ್ಲಿ ನಡೆದಿತ್ತು. ಪ್ರಧಾನಿ ಮೋದಿ ಭಾಷಣ ಮಾಡಲಿದ್ದ ಕೆಲವೇ ಕ್ಷಣಗಳ ಮೊದಲು ಬಾಂಬ್ ಸ್ಫೋಟಿಸಲಾಗಿತ್ತು. ಆದರೆ ಮೋದಿ ರ‍್ಯಾಲಿ ಮುಂದುವರಿಸಿದ್ದರು.

ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಆರಂಭದಲ್ಲಿ ಪಾಟ್ನಾ ಪೊಲೀಸರು ಮಾಡಿದ್ದರು. ಬಳಿಕ ಪ್ರಕರಣವನ್ನು ನಂತರ ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಲಾಗಿತ್ತು. ಈ ಪ್ರಕರಣದ ಒಂಬತ್ತು ಆರೋಪಿಗಳನ್ನು ಇಮ್ತಿಯಾಜ್ ಅನ್ಸಾರಿ, ಹೈದರ್ ಅಲಿ, ನವಾಜ್ ಅನ್ಸಾರಿ, ಮುಜ್ಮುಲ್ಲಾ, ಉಮರ್ ಸಿದ್ದಿಕಿ, ಅಜರ್ ಕುರೇಸಿ, ಅಹ್ಮದ್ ಹುಸೇನ್, ಫಿರೋಜ್ ಅಸ್ಲಾಂ ಮತ್ತು ಇಫ್ತಿಕರ್ ಆಲಂ ಎಂದು ಗುರುತಿಸಲಾಗಿತ್ತು. ಇನ್ನೋರ್ವ ಆರೋಪಿ ಫಕ್ಯುದ್ದೀನ್‌ನನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಎನ್‌ಐಎ ಖುಲಾಸೆಗೊಳಿಸಿತ್ತು.

ಶಿಕ್ಷೆಗೊಳಗಾದ ವ್ಯಕ್ತಿಗಳು ಇಂಡಿಯನ್ ಮುಜಾಹಿದ್ದೀನ್ ಮತ್ತು ಸ್ಟೂಡೆಂಟ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾದ ಸದಸ್ಯರು ಎಂದು ತಿಳಿದು ಬಂದಿದೆ. ಆರೋಪಿಗಳು ಪ್ರಸ್ತುತ ಪಾಟ್ನಾದ ಬ್ಯೂರ್ ಜೈಲಿನಲ್ಲಿದ್ದಾರೆ.

ಪ್ಯಾಲೆಸ್ಟೀನ್ ಮೇಲೆ ಇಸ್ರೇಲ್​ ದಾಳಿ; 25 ಮಂದಿ ಬಲಿ!

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…