More

    ದೆಹಲಿ ಮದ್ಯ ಹಗರಣ: ಮನೀಶ್ ಸಿಸೋಡಿಯಾಗೆ ಇಂದು ಸಿಗಲಿಲ್ಲ ರಿಲೀಫ್;  ನ್ಯಾಯಾಂಗ ಬಂಧನ ಏಪ್ರಿಲ್ 18 ರವರೆಗೆ ವಿಸ್ತರಣೆ

    ನವದೆಹಲಿ:  ಇಂದೂ ಕೂಡ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಿಲೀಫ್ ಸಿಕ್ಕಿಲ್ಲ. ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 18 ರವರೆಗೆ ವಿಸ್ತರಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆಯು ಈಗ ಏಪ್ರಿಲ್ 18 ರಂದು ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನಡೆಯಲಿದೆ. ಪ್ರತಿಯೋರ್ವರು ದಾಖಲೆಗಳನ್ನು ಪರಿಶೀಲಿಸಲು ಇದುವರೆಗೆ ಎಷ್ಟು ಸಮಯ ತೆಗೆದುಕೊಂಡಿದ್ದಾರೆ ಎಂಬುದನ್ನು ತಿಳಿಸುವಂತೆ ನ್ಯಾಯಾಲಯವು ಇಡಿಗೆ ಕೇಳಿದೆ.

    ಮನೀಶ್ ಸಿಸೋಡಿಯಾ ಫೆಬ್ರವರಿ 26 ರಿಂದ ಜೈಲಿನಲ್ಲಿದ್ದಾರೆ. ಸಿಸೋಡಿಯಾ ಮದ್ಯದ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಅಬಕಾರಿ ನೀತಿಯನ್ನು ಬದಲಾಯಿಸಿದ್ದು, ಭಾರೀ ಮೊತ್ತದ ಲಂಚ ಪಡೆದಿದ್ದಾರೆ ಎಂದು ಸಿಬಿಐ ಮತ್ತು ಇಡಿ ಹೇಳಿಕೊಂಡಿದೆ.

    ಇದಕ್ಕೂ ಮುನ್ನ ಏಪ್ರಿಲ್ 2 ರಂದು ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆದಿತ್ತು. ಈ ಸಂದರ್ಭದಲ್ಲಿ, ಅವರ ವಿರುದ್ಧ ನಡೆಯುತ್ತಿರುವ ತನಿಖೆ ಪೂರ್ಣಗೊಂಡಿರುವುದರಿಂದ ಜೈಲಿನಲ್ಲಿರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು.

    ಅಂದಹಾಗೆ ಮನೀಶ್ ಸಿಸೋಡಿಯಾ ಅವರು ತಿಹಾರ್ ಜೈಲಿನಿಂದ ತಮ್ಮ ವಿಧಾನಸಭಾ ಕ್ಷೇತ್ರದ ಜನತೆಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಅವರು ತಮ್ಮ ಪರಿಸ್ಥಿತಿಯನ್ನು ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಬ್ರಿಟಿಷರು ನಡೆಸಿದ ದೌರ್ಜನ್ಯದೊಂದಿಗೆ ಹೋಲಿಸಿದ್ದಾರೆ ಮತ್ತು ಶಿಕ್ಷಣದ ಬಗ್ಗೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಜೈಲಿನಿಂದ ಹೊರಬರುವುದಾಗಿಯೂ ಸಿಸೋಡಿಯಾ ಭರವಸೆ ವ್ಯಕ್ತಪಡಿಸಿದ್ದಾರೆ. “ಶೀಘ್ರದಲ್ಲೇ ನಿಮ್ಮನ್ನು ಹೊರಗೆ ನೋಡೋಣ” ಎಂದು ಅವರು ಹೇಳಿದ್ದಾರೆ.

    ಬ್ರಿಟಿಷ್ ದೊರೆಗಳಿಗೂ ಅಧಿಕಾರದ ದುರಹಂಕಾರವಿತ್ತು ಮತ್ತು ಸುಳ್ಳು ಪ್ರಕರಣಗಳಲ್ಲಿ ಜನರನ್ನು ಜೈಲಿಗೆ ಕಳುಹಿಸಿದರು. ಈ ವಿಚಾರದಲ್ಲಿಯೂ ಸಾಕಷ್ಟು ರಾಜಕೀಯ ನಡೆಯುತ್ತಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರು ಶೀಘ್ರದಲ್ಲೇ ಜೈಲಿನಿಂದ ಹೊರಬರುತ್ತಾರೆ, ಏಕೆಂದರೆ ಈ ಹಗರಣವನ್ನು ಆಮ್ ಆದ್ಮಿ ಪಕ್ಷ ಮಾಡಿಲ್ಲ. ಬಿಜೆಪಿ ಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಹೇಳಿದ್ದಾರೆ.

    ಟೀ ಅಂಗಡಿಯೆದುರು ಆಟವಾಡುತ್ತಿದ್ದ ಬಾಲಕ ಮ್ಯಾನ್‌ಹೋಲ್‌ಗೆ ಬಿದ್ದು ಮೃತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts