BJP MLA ಮುನಿರತ್ನಗೆ ಜೈಲೇ ಗತಿ; ಮತ್ತೆ ಕಸ್ಟಡಿಗೆ, ಎಷ್ಟು ದಿನ? ಇಲ್ಲಿದೆ ಕಂಪ್ಲೀಟ್​ ಡೀಟೇಲ್ಸ್​

Munirathna
Published on

ಬೆಂಗಳೂರು: ಅತ್ಯಾಚಾರ (Rape) ಹಾಗೂ HIV ಸೋಂಕಿತ ಮಹಿಳೆಯನ್ನು ಹನಿಟ್ರ್ಯಾಪ್​ಗೆ (Honeytrap) ಬಳಸಿಕೊಂಡ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ರಾಜಾರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ (BJP MLA) ಮುನಿರತ್ನಗೆ ವಿಧಿಸಲಾಗಿದ್ದ ನ್ಯಾಯಾಂಗ ಬಂಧನದ (judicial Custody) ಅವಧಿಯನ್ನು ಕೋರ್ಟ್​ ವಿಸ್ತರಿಸಿದೆ.

ಈ ಹಿಂದೆ ವಿಧಿಸಲಾಗಿದ್ದ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಶಾಸಕ ಮುನಿರತ್ನ ಅವರನ್ನು 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ವಿಚಾರಣೆಯ ಅವಶ್ಯಕತೆಯಿದ್ದು, ಮತ್ತೆ ವಶಕ್ಕೆ ನೀಡುವಂತೆ ಎಸ್‌ಐಟಿ ಕೇಳದ ಹಿನ್ನೆಲೆಯಲ್ಲಿ ಕೋರ್ಟ್‌ ಮತ್ತೆ ಅಕ್ಟೋಬರ್​ 19ರವರೆಗೂ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.

ಈ ವೇಳೆ ಮನೆ ಊಟಕ್ಕೆ ಅನುಮತಿ ನೀಡುವಂತೆ ಮುನಿರತ್ನ ಪರ ವಕೀಲರು ಮನವಿ ಮಾಡಿದರು. ಈ ಮನವಿಗೆ ಕೋರ್ಟ್‌ ಜೈಲಾಧಿಕಾರಿಗಳಿಗೆ ಮನವಿ ಮಾಡಿ ಎಂದು ಸೂಚನೆ ನೀಡಿದೆ. ಮೊನ್ನೆಯಷ್ಟೇ ಡಿಎನ್ಎ ಟೆಸ್ಟ್‌‌‌ಗೆ ಬ್ಲಡ್ ಸ್ಯಾಂಪಲ್ಸ್ ಸಂಗ್ರಹಿಸಲು ಕೋರ್ಟ್ ಆದೇಶ ನೀಡಿತ್ತು. ಆದರೆ ಇದಕ್ಕೆ ಮುನಿರತ್ನ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ಈಗಾಗಲೇ ಕಗ್ಗಲೀಪುರ ಪೊಲೀಸರು ರಕ್ತದ ಮಾದರಿ ಸಂಗ್ರಹ ಮಾಡಿದ್ದಾರೆ ಎಂದು ಆಕ್ಷೇಪಣೆ ಸಲ್ಲಿಸಿದ್ದರು. ಎಸ್‌ಪಿಪಿ ಸ್ಪಷ್ಟ ಉತ್ತರ ನೀಡುವಂತೆ ಕೋರ್ಟ್ ಸೂಚಿಸಿದ ಕೋರ್ಟ್​ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net