More

  ಮುಂಬೈ: ಹಾರ್ದಿಕ್ ಪಾಂಡ್ಯ ಸಹೋದರನ ಪೊಲೀಸ್​ ಕಸ್ಟಡಿ ವಿಸ್ತರಣೆ!

  ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರಾದ ಹಾರ್ದಿಕ್​ ಮತ್ತು ಕೃಣಾಲ್​ ಪಾಂಡ್ಯ ಸಹೋದರರ ಬ್ಯುಸಿನಸ್​ ವಿಷಯಕ್ಕೆ ಸಂಬಂಧಿಸಿದಂತೆ 4 ಕೋಟಿ ರೂ.ಗಳನ್ನು ವಂಚನೆ ಮಾಡಿದ ಮಲ ಸಹೋದರ ವೈಭವ್​ ಪೊಲೀಸ್ ಅವಧಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಏಪ್ರಿಲ್ 17 ರವರೆಗೆ ವಿಸ್ತರಿಸಿದೆ.

  ಇದನ್ನೂ ಓದಿ: ಧಾರವಾಡದಲ್ಲಿ ಭರ್ಜರಿ ಐಟಿ ಬೇಟೆ: ಒಂದೇ ಫ್ಲ್ಯಾಟ್‌ನಲ್ಲಿ ಸಿಕ್ತು 18 ಕೋಟಿ ರೂ.!

  ಆರೋಪಿ ವೈಭವ್ ಪಾಂಡ್ಯ ಅವರ ಹಿಂದಿನ ರಿಮಾಂಡ್ ಅವಧಿ ಮುಗಿದ ನಂತರ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ತನಿಖೆಗಾಗಿ ವೈಭವ್ ಅವರ ಕಸ್ಟಡಿ ವಿಸ್ತರಿಸುವಂತೆ ಮುಂಬೈ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ನ್ಯಾಯಾಲಯಕ್ಕೆ ಮನವಿ ಮಾಡಿದೆ.

  ವೈಭವ್ ಪರ ವಕೀಲರಾದ ನಿರಂಜನ್ ಮುಂಡರಗಿ ಅವರು, ಕೆಲವು ತಪ್ಪು ತಿಳುವಳಿಕೆಯಿಂದ ಪ್ರಕರಣ ದಾಖಲಿಸಲಾಗಿದ್ದು, ಸೌಹಾರ್ದಯುತವಾಗಿ ಇತ್ಯರ್ಥಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಪ್ರತಿಪಾದಿಸಿದರು. ಆರೋಪಿಗಳು ತನಿಖಾಧಿಕಾರಿಗಳಿಗೆ ಸಹಕರಿಸಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.
  ಎರಡೂ ಕಡೆಯ ವಾದವನ್ನು ಆಲಿಸಿದ ನಂತರ, ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಲ್.ಎಸ್.ಪಧೇನ್ ಅವರು, ವೈಭವ್ ಅವರ ಪೊಲೀಸ್ ಕಸ್ಟಡಿಯನ್ನು ವಿಸ್ತರಿಸಿದರು.

  ನ್ಯಾಯಾಲಯವು ಅವರ ಕಸ್ಟಡಿಯನ್ನು ಶುಕ್ರವಾರದವರೆಗೆ ವಿಸ್ತರಿಸಿತು. ಕ್ರಿಕೆಟಿಗ ಸಹೋದರರಿಗೆ 4 ಕೋಟಿ ರೂ.ಗಿಂತ ಹೆಚ್ಚು ವಂಚಿಸಿದ ಆರೋಪದ ಮೇಲೆ 37 ವರ್ಷದ ವೈಭವ್ ಏಪ್ರಿಲ್ 8 ರಂದು ಬಂಧನಕ್ಕೆ ಒಳಗಾಗಿದ್ದ. ವೈಭವ್ ವಿರುದ್ಧ ವಿವಿಧ ಸೆಕ್ಷನ್​ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

  ಕಾಂಗ್ರೆಸ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಬಾಲಿವುಡ್​ ನಟ ಅಮೀರ್ ಖಾನ್..! ಕಾರಣ ಹೀಗಿದೆ?

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts