More

    ಮದ್ಯಸೇವಿಸಿ ಬೆಂ-ಮೈ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ: ದಂಡದೊಂದಿಗೆ ಪಾಠ ಕಲಿಸಿದ ಮದ್ದೂರು ಜೆಎಂಎಫ್‌ಸಿ ನ್ಯಾಯಾಲಯ

    ಮದ್ದೂರು: ಮದ್ಯಸೇವಿಸಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿದ ವ್ಯಕ್ತಿಗೆ ಮದ್ದೂರು ಪಟ್ಟಣದ ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಲಯ ಬರೋಬ್ಬರಿ 69 ಸಾವಿರ ರೂ ದಂಡ ವಿಧಿಸಿದೆ.
    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಧನಂಜಯ ಎಂಬುವರು ಸ್ನೇಹಿತರೊಂದಿಗೆ ಕಾರಿನಲ್ಲಿ ಬರುತ್ತಿದ್ದರು. ಮದ್ದೂರು ತಾಲೂಕು ನಿಡಘಟ್ಟ ಗ್ರಾಮದ ಬಳಿ ಭಾನುವಾರ ಸಂಜೆ ಸಂಚಾರ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಮೈಸೂರಿನಿಂದ ಬೆಂಗಳೂರು ಕಡೆಗೆ ಕಾರಿನಲ್ಲಿ ಹೋಗುತ್ತಿದ್ದ ಧನಂಜಯ, ಅತೀ ವೇಗ ಮತ್ತು ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುವುದು ಮಾತ್ರವಲ್ಲದೆ ಇತರೆ ವಾಹನ ಚಾಲಕರಿಗೆ ಆತಂಕ ಸೃಷ್ಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗಮನಿಸಿದ ಪೊಲೀಸರು ವಾಹನ ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಎಲ್ಲರೂ ಪಾನಮತ್ತರಾಗಿರುವುದು ಗೊತ್ತಾಗಿದೆ. ಜತೆಗೆ ತಪಾಸಣೆಗೂ ಸಹಕರಿಸದೆ ಪೊಲೀಸರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ.
    ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ದೂರಿನ ಮೇರೆಗೆ ಮದ್ದೂರು ಸಂಚಾರ ಠಾಣೆ ಪೋಲೀಸರು ಕಾರನ್ನು ವಶಕ್ಕೆ ತೆಗೆದುಕೊಂಡು ಚಾಲಕ ಹಾಗೂ ಸ್ನೇಹಿತರ ವಿರುದ್ಧ ಸೆಕ್ಷನ್ 185, 184, 188, 179(1) (2), 177 ಮೊಕದ್ದಮೆ ದಾಖಲು ಮಾಡಿದ್ದರು. ಜತೆಗೆ ಮದ್ದೂರು ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಎಫ್‌ಐಆರ್ ಸಲ್ಲಿಸಿದ್ದರು. ಮಾ.21ರಂದು ವಿಚಾರಣೆ ನಡೆಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಪ್ರಿಯಾಂಕಾ ಅವರು ಕಾರು ಚಾಲಕ ಧನಂಜಯ ಹಾಗೂ ಸ್ನೇಹಿತರಿಗೆ 69 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts