More

    ಲೈಂಗಿಕ ಕಿರುಕುಳ ಪ್ರಕರಣ; ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ರಿಲೀಫ್​ ನೀಡಿದ ಕೋರ್ಟ್

    ಬೆಂಗಳೂರು: ಮನೆ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಾಜಿ ಸಚಿವ, ಜೆಡಿಎಸ್​ ಶಾಸಕ ಎಚ್​.ಡಿ. ರೇವಣ್ಣ ಅವರಿಗೆ ಮಧ್ಯಂತರ ಜಾಮೀನು ಮಾಡಿದೆ.

    ಹಾಸನದ ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ರೇವಣ್ಣ, ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​​ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಧೀಶರು ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ಒಂದು ದಿನದ ಮಟ್ಟಿಗೆ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿದ್ದಾರೆ.

    ಇದನ್ನೂ ಓದಿ: ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಪತ್ರ ಬರೆದ ಮಾಜಿ ಪ್ರಧಾನಿ ಎಚ್​ಡಿಡಿ; ಪತ್ರದಲ್ಲೇನಿದೆ?

    ಜಾಮೀನಿಗೆ ಸಂಬಂಧಿಸಿದಂತೆ ಇಬ್ಬರ ಶ್ಯೂರಿಟಿ, 5 ಲಕ್ಷ ರೂ. ಬಾಂಡ್ ಒದಗಿಸುವಂತೆ ಷರತ್ತು ವಿಧಿಸಿ ಮತ್ತೆ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ(ಮೇ 17) ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ. ಇದರೊಂದಿಗೆ ರೇವಣ್ಣಗೆ ತಾತ್ಕಾಲಿಕವಾಗಿ ರಿಲೀಫ್ ಸಿಕ್ಕಂತಾಗಿದೆ.

    ಜಾಮೀನು ನೀಡಬಹುದಾದ ಅಪರಾಧವಾಗಿರುವುದರಿಂದ ಆಕ್ಷೇಪಿಸುವಂತಿಲ್ಲ. ಆಕ್ಷೇಪ ಎತ್ತುವ ಲೋಕಸ್ ಸ್ಟಾಂಡಿ(ಅಧಿಕಾರ) ಎಸ್‌ಪಿಪಿಗೆ ಇಲ್ಲ. ಹೀಗಾಗಿ ಜಾಮೀನು ನೀಡಬೇಕೆಂದು ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಪರ ವಕೀಲ ಅರುಣ್ ಮನವಿ ಮಾಡಿದರು. ಇದಕ್ಕೆ ತಕರಾರು ಎತ್ತಿರುವ ಎಸ್‌ಐಟಿ, ಜಾಮೀನು ಅರ್ಜಿ ವಿಚಾರಣೆ ಈ ಕೋರ್ಟ್ ನಲ್ಲಿ ನಡೆಯುವಂತಿಲ್ಲ ಎಂದು ಜಾಮೀನು ಅರ್ಜಿಯ ಕಾನೂನುಬದ್ಧತೆ ಪ್ರಶ್ನಿಸಿದ ಎಸ್ ಪಿಪಿ ಜಾಯ್ನಾ ಕೊಥಾರಿ , ಈ ಪ್ರಕರಣದಲ್ಲಿ ಜಾಮೀನು ರಹಿತ ಸೆಕ್ಷನ್ ಗಳೂ ಇವೆ. ಹೀಗಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್ ಪ್ರಕರಣದ ವಿಚಾರಣೆ ನಡೆಸಬಾರದು ಎಂದು ಆಕ್ಷೇಪಣೆ ಎತ್ತಿದ್ದು, ನ್ಯಾಯಾಂಗ ಬಂಧನಕ್ಕೆ ವಹಿಸಲು ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts