More

    ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್​ ಶಾಕ್​: ಧಾರವಾಡಕ್ಕೆ ನೋ ಎಂಟ್ರಿ, ಅರ್ಜಿ ವಜಾ

    ಬೆಂಗಳೂರು/ಧಾರವಾಡ: ಮಾಜಿ ಸಚಿವ ಹಾಗೂ ಕಾಂಗ್ರೆಸ್​ ನಾಯಕ ವಿನಯ್ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆಘಾತ ನೀಡಿದೆ.

    ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್​ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ​ ವಜಾಗೊಳಿಸಿದೆ. ಧಾರವಾಡ ಪ್ರವೇಶಿಸದಂತೆ ವಿನಯ್​ ಕುಲರ್ಣಿಗೆ ಸುಪ್ರೀಂ ಕೋರ್ಟ್ ನಿಷೇಧ ಹೇರಿತ್ತು. ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿರ್ಬಂಧ ಸಡಿಲಿಸಿ, ಧಾರವಾಡ ಪ್ರವೇಶಕ್ಕೆ ಅನುಮತಿ ನೀಡುವಂತೆ ವಿನಯ್​ ಕುಲಕರ್ಣಿ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು.

    ಇದನ್ನೂ ಓದಿ: ಕಣ್ಣಿಗೊಂದು ಸವಾಲ್​! ಈ ಫೋಟೋದಲ್ಲಿ ಈವರೆಗೂ ಯಾರೂ ಪತ್ತೆಹಚ್ಚದ ತೋಳವನ್ನು ನೀವು ಹುಡುಕುವಿರಾ?

    ಆದರೆ, ನಿರ್ಬಂಧ ಸಡಿಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿಲ್ಲ. ವಿನಯ್​ ಕುಲಕರ್ಣಿ ಸಲ್ಲಿಸಿದ ಅರ್ಜಿಯನ್ನು ನ್ಯಾ. ಜಯಂತ್ ಕುಮಾರ್ ಅವರು ವಜಾಗೊಳಿಸಿದ್ದಾರೆ.

    ಸುಪ್ರೀಂಕೋರ್ಟ್​ ಆದೇಶವೇನು?
    ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದ ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಸುಪ್ರೀಂಕೋರ್ಟ್​ ಕೋರ್ಟ್​ 2021ರ ಆಗಸ್ಟ್​ 11ರಂದು ಷರತ್ತುಬದ್ಧ ಜಾಮೀನು ನೀಡಿತ್ತು. ಧಾರವಾಡಕ್ಕೆ ಭೇಟಿ ನೀಡದಂತೆ ಕುಲಕರ್ಣಿಗೆ ಉನ್ನತ ನ್ಯಾಯಾಲಯ ಆದೇಶಿಸಿದೆ.

    ಅರ್ಜಿ ಸಲ್ಲಿಸಿದ್ದ ವಿನಯ್​
    ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ತನಗೆ ಧಾರವಾಡ ಪ್ರವೇಶ ನೀಡುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ್ದರು. ಆದರೆ, ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

    ಇದನ್ನೂ ಓದಿ: ಇಬ್ಬರು ಮಾಡೆಲ್​ಗಳಿಗೆ 60 ಸಾವಿರ ರೂಪಾಯಿ! ಹೋಟೆಲ್​ ರೂಮ್​ನಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದ ನಟಿ ಆರತಿ

    ಸಾಕ್ಷಿಗಳ ಮೇಲೆ ಒತ್ತಡ ಹೇರುವ ಸಾಧ್ಯತೆ
    ವಿನಯ್​ ಕುಲಕರ್ಣಿ ಅರ್ಜಿಯನ್ನು ಸಿಬಿಐ ಪ್ರಶ್ನೆ ಮಾಡಿತ್ತು. ಸಿಬಿಐ ವಿಶೇಷ ಅಭಿಯೋಜಕ ಗಂಗಾಧರ ಶೆಟ್ಟಿ, ಸಿಬಿಐನಿಂದ ಎಲ್ಲ 90 ಸಾಕ್ಷಿಗಳಿಗೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದಿದ್ದರು. ಇನ್ನು ಸ್ಥಳೀಯ ಪೊಲೀಸರೇ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಹಣ ಪಡೆದು ಸಾಕ್ಷಿ ಮುಚ್ಚಿಡಲು ಯತ್ನಿಸಿದ್ದಾರೆ ಎಂಬುದು ಸಿಬಿಐ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇನ್ನು ಆರೋಪಿ ನೇರವಾಗಿ ಧಾರವಾಡಕ್ಕೆ ತೆರಳಿ ನಾಮಪತ್ರ ಸಲ್ಲಿಸಲು ಅವಕಾಶವಿಲ್ಲ. ಆದರೆ, ಸೂಚಕರ ಮೂಲಕ ನಾಮಪತ್ರ ಸಲ್ಲಿಸಲು ಅವಕಾಶವಿದೆ ಎಂದು ವಾದ ಮಂಡಿಸಿದರು. ಅಂತಿಮವಾಗಿ ವಾದ-ಪ್ರತಿವಾದ ಆಲಿಸಿದ ಕೋರ್ಟ್ ವಿಚಾರಣೆ ಪೂರ್ಣಗೊಳಿಸಿ, ಏಪ್ರಿಲ್​.18ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ. ವಿಚಾರಣೆ ವೇಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಕೂಡ ಹಾಜರಾಗಿದ್ದರು. ಇದೀಗ ತೀರ್ಪು ಪ್ರಕಟವಾಗಿದ್ದು, ವಿನಯ್​ ಕುಲಕರ್ಣಿಗೆ ಕೋರ್ಟ್​ ಶಾಕ್​ ನೀಡಿದೆ.

    ಯೋಗೇಶ್​ ಗೌಡ ಹತ್ಯೆ ಪ್ರಕರಣ; ವಿನಯ್​ ಕುಲಕರ್ಣಿ ಅರ್ಜಿ ಕಾಯ್ದಿರಿಸಿದ ನ್ಯಾಯಾಲಯ

    ಯೋಗೀಶ್ ಗೌಡ ಕೊಲೆ ಕೇಸ್​: ಧಾರವಾಡಕ್ಕೆ ಭೇಟಿ ನೀಡದಂತೆ ವಿನಯ್​ ಕುಲಕರ್ಣಿಗೆ ಸುಪ್ರೀಂನಿಂದ ಷರತ್ತುಬದ್ಧ ಜಾಮೀನು

    ಯೋಗೀಶ್​ಗೌಡ ಕೊಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದ ವಿನಯ್​ ಕುಲಕರ್ಣಿ ರಹಸ್ಯ ಇಲ್ಲಿದೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts