More

    ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಪ್ರವೇಶ ನಿರ್ಬಂಧ ತೆರವುಗೊಳಿಸಿದ ಹೈಕೋರ್ಟ್

    ಕಲಬುರಗಿ: ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ಖ್ಯಾತ ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆಗೆ ವಿಧಿಸಿದ್ದ ನಿರ್ಬಂಧವನ್ನು ಕಲಬುರಗಿ ಹೈಕೋರ್ಟ್​ ತೆರವುಗೊಳಿಸಿ ಸೂಕ್ತ ಭದ್ರತೆಯನ್ನು ನೀಡುವಂತೆ ಆದೇಶಿಸಿದೆ.

    ಕಲಬುರಗಿಯ ಚಿತ್ತಾಪುರದ ಬಾಪೂ ರಾವ್ ಕಲ್ಯಾಣ ಮಂಟಪದಲ್ಲಿ ಗುರುವಾರ ನಮೋ ಬ್ರಿಗೇಡ್​ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ತಾಲ್ಲೂಕು ಆಡಳಿತ ಅನುಮತಿ ನಿರಾಕರಿಸಿದ್ದು, ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಿತ್ತು.

    ತಾಲ್ಲೂಕು ಆಡಳಿತದ ಕ್ರಮವನ್ನು ಖಂಡಿಸಿ ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಹೈ ಕೋರ್ಟ್​ ಮೆಟ್ಟಿಲೇರಿದ್ದರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಿ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸುವಂತೆ ಆದೇಶಿಸಿದೆ.

    ಇದನ್ನೂ ಓದಿ: ಹಿಮಾಚಲ ಕಾಂಗ್ರೆಸ್​ನಲ್ಲಿ​​ ಭಿನ್ನಮತ; ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆಸಿದ ಟ್ರಬಲ್​ ಶೂಟರ್

    ಈ ಕುರಿತು ಸಾಮಾಜಿಕ ಎಕ್ಸ್​ನಲ್ಲಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಚಕ್ರವರ್ತಿ ಸೂಲಿಬೆಲೆ, ನ್ಯಾಯಾಲಯದ ಆದೇಶವನ್ನು ಕೈಯಲ್ಲಿ ಹಿಡಿದುಕೊಂಡು ಚಿತ್ತಾಪುರ ಕಡೆಗೆ ಹೋಗುತ್ತಿದ್ದೇನೆ. ನನ್ನ ಪರ ವಾದ ಮಂಡಿಸಿದ ವಕೀಲರಿಗೆ ಧನ್ಯವಾದಗಳು. ಬೃಹತ್ ಮಟ್ಟದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

    ಪ್ರಕರಣದ ಹಿನ್ನಲೆ?

    ಬೀದರ್‌ನ ಬಾಲ್ಕಿಯಿಂದ ಕಲಬುರಗಿ ಜಿಲ್ಲೆಯೊಳಗೆ ಆಗಮಿಸಲು ಚಕ್ರವರ್ತಿ ಸೂಲಿಬಲೆ ಅವರಿಗೆ ಪೊಲೀಸರು ಅನುಮತಿ ನೀಡಿರಲಿಲ್ಲ. ಸೂಲಿಬೆಲೆ ಅವರ ಪ್ರಚೋದನಕಾರಿ ಭಾಷಣದಿಂದ ಶಾಂತಿಗೆ ಧಕ್ಕೆ ಬರುವ ಸಾಧ್ಯತೆ ಕಾರಣಕ್ಕೆ ಪ್ರವೇಶ ನಿರ್ಬಂಧಿಸಿ ಉಪ ವಿಭಾಗಾಧಿಕಾರಿ ರೂಪೇಂದ್ರ ಜೌರ್ ಅವರು ಆದೇಶ ಹೊರಡಿಸಿದ್ದರು.

    ಸಾಮಾಜಿಕ ಜಾಲತಾಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸೂಲಿಬೆಲೆ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಿಯಾಂಕ್ ಖರ್ಗೆ ಫೈಟರ್ ಅಂತ ತಿಳಿದಿದ್ದೆ. ಆದರೆ, ಈ ರೀತಿ ನನ್ನನ್ನು ಜಿಲ್ಲೆಯೊಳಗೆ ಬರದಂತೆ ತಡೆಯುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಪ್ರಿಯಾಂಕ್ ಖರ್ಗೆ ಹಿಟ್ ಆ್ಯಂಡ್ ರನ್‌ ಮಾಸ್ಟರ್ ಎಂದು ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ ನಡೆಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts