More

    ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್; ಜೈಲಿನಲ್ಲಿದ್ದ ಚೇತನ್​ಗೆ ಜಾಮೀನು

    ಬೆಂಗಳೂರು: ಹಿಂದು ಧರ್ಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿ ನಟ ಚೇತನ್ ಮಾ.21ರಂದು ಬಂಧನವಾಗಿದ್ದರು. ಬಳಿಕ 32ನೇ ಎಸಿಎಮ್​ಎಮ್​ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿತ್ತು.

    ಇದೀಗ ನಟ ಚೇತನ್​ಗೆ 32 ನೇ ಎಸಿಎಂಎಂ ನ್ಯಾಯಾಲಯ ಜಾಮೀನು ನೀಡಿದೆ. ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಜೆ.ಲತಾ ಅವರು ಆದೇಶ ನೀಡಿದ್ದಾರೆ. ಆದೇಶದಲ್ಲಿ 25 ಸಾವಿರ ರೂ. ವೈಯಕ್ತಿಕ ಬಾಂಡ್ ಮತ್ತು ಒಬ್ಬರ ಭದ್ರತೆ ನೀಡಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸಾಮಾಜಿಕ ಕಾರ್ಯಕರ್ತೆಯ ಹತ್ಯೆ!

    ಬೆಂಗಳೂರಿನ ಶಿವಕುಮಾರ್ ಎಂಬವರು ನೀಡಿದ್ದ ದೂರಿನ ಮೇಲೆ ನಟ ಚೇತನ್ ಬಂಧನವಾಗಿತ್ತು. ಶೇಷಾದ್ರಿಪುರಂ ಠಾಣೆ ಪೊಲೀಸರು ಐಪಿಸಿ 295A, 505B ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

    ಚೇತನ್ ಫೇಸ್​ಬುಕ್ ಪೋಸ್ಟ್​ನಲ್ಲೇನಿತ್ತು?

    ನಟ ಚೇತನ್ ತಮ್ಮ ಫೇಸ್​ಬುಕ್​ನಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಬರೆದುಕೊಂಡಿದ್ದರು. ಇದಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು. ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎಂಬುದು ಸುಳ್ಳು. ಬಾಬರಿ ಮಸೀದಿ ರಾಮನ ಜನ್ಮಭೂಮಿ ಎಂದು ನಂಬಿರುವುದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದಾಗಿದೆ ಎಂದು ಬರೆದುಕೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts