ನ್ಯಾಯಾಲಯಗಳ ರಜೆ ಆ.7ರವರೆಗೆ ವಿಸ್ತರಣೆ

High court logo 2
Published on

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿ ಸುಧಾರಿಸದ ಕಾರಣ ಹೈಕೋರ್ಟ್​ನ ಮೂರು ಪೀಠಗಳು ಸೇರಿ ರಾಜ್ಯದ ಎಲ್ಲ ಜಿಲ್ಲಾ ಹಾಗೂ ವಿಚಾರಣಾ ನ್ಯಾಯಲಯಗಳಿಗೆ ನೀಡಲಾಗಿದ್ದ ರಜೆಯನ್ನು ಆ. 7ರವರೆಗೆ ವಿಸ್ತರಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಆದೇಶದ ಮೇರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬದಾಮಿಕರ್ ರಜೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಆದರೆ, ಸದ್ಯ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳನ್ವಯ (ಎಸ್​ಒಪಿ) ಸೀಮಿತವಾಗಿ ಕಾರ್ಯಕಲಾಪ ನಡೆಸುತ್ತಿರುವ ಕೋರ್ಟ್​ಗಳಿಗೆ ಈ ರಜೆ ವಿಸ್ತರಣೆ ಆದೇಶ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಲಾಕ್​ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಕೋರ್ಟ್ ಗಳಿಗೆ ಮಾ.26ರಿಂದ ರಜೆ ಘೊಷಿಸಲಾಗಿತ್ತು. ಅದನ್ನು ಕಾಲಕಾಲಕ್ಕೆ ವಿಸ್ತರಿಸಿಕೊಂಡು ಬರಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net