More

    ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ! ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್​

    ಬೆಂಗಳೂರು: ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ನಡೆಯಿತು. ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ಮತ್ತು ಎಸ್​ಐಟಿ ಲಾಯರ್​ ನಡುವಿನ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಇದೀಗ ರೇವಣ್ಣ ಅರ್ಜಿ ವಿಚಾರಣೆಯನ್ನು ಸೋಮವಾರ ಬೆಳಗ್ಗೆ 11:30ಕ್ಕೆ ಮುಂದೂಡಿದೆ.

    ಇದನ್ನೂ ಓದಿ: ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ! ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್​

    ಒಂದೆಡೆ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂಬ ಒತ್ತಡ ಹೆಚ್ಚಾಗುತ್ತಿದ್ದರೆ, ಮತ್ತೊಂದೆಡೆ ಅವರ ಜಾಮೀನು ವಿಚಾರ ಕೋರ್ಟ್​ನಲ್ಲಿ ನಡೆಯುತ್ತಿದೆ. ಇನ್ನು ರೇವಣ್ಣ ಪರ ನ್ಯಾಯಾಲಯದಲ್ಲಿ ವಾದ ಮಾಡುತ್ತಿರುವ ಹಿರಿಯ ವಕೀಲ ಸಿ.ವಿ. ನಾಗೇಶ್, 5 ದಿನವಾದರೂ ಏಕೆ ಮಹಿಳೆಯ ಹೇಳಿಕೆ ಪಡೆದಿಲ್ಲ. ಅಪಹರಣವಾಗಿದ್ದಾರೆ ಎಂದು ಹೇಳಲಾದ ಮಹಿಳೆ ಇಂದು ಆರೋಗ್ಯವಾಗಿ ಪತ್ತೆ ಎಂದು ವಾದಿಸಿದ್ದಾರೆ.

    ಈ ಕೇಸ್ ದಾಖಲಿಸಿರುವುದೇ ಕಾನೂನುಬಾಹಿರ. ಏ.29ರಿಂದ ಮೇ 5 ರವರೆಗೆ ಆಕೆಗೆ ತೊಂದರೆಯಾಗಿಲ್ಲ. ನಿನ್ನೆಯಿಂದ ರೇವಣ್ಣ ಅವರು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ, ಅದು ಅನಗತ್ಯ. ಈ ಸೆಕ್ಷನ್​ಗಳು ರೇವಣ್ಣ ಅವರಿಗೆ ಅನ್ವಯವಾಗುವುದಿಲ್ಲ. ಮಹಿಳೆಯನ್ನು ಕರೆದೊಯ್ದು ವಾಹನಗಳನ್ನು ಪತ್ತೆಹಚ್ಚಬೇಕು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ರೇವಣ್ಣ ಪರ ವಾದ ಮಂಡಿಸಿದ್ದಾರೆ.

    ಇಬ್ಬರ ವಾದ-ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್​, ಇದೀಗ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರ (ಮೇ.13) ಬೆಳಗ್ಗೆ 11:30ಕ್ಕೆ ಮುಂದೂಡಿದೆ. 

    ಧೋನಿ ಸಹ ಪಾಠ ಕಲಿಸಲು ಸಾಧ್ಯವಿಲ್ಲ… ಶಾಕಿಂಗ್ ಹೇಳಿಕೆ ನೀಡಿದ ಹಾರ್ದಿಕ್ ಪಾಂಡ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts