More

  ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ಜೈಲು ಫಿಕ್ಸ್​​? ಆದೇಶ ಕಾಯ್ದಿರಿಸಿದ ನ್ಯಾಯಾಲಯ

  ದೆಹಲಿ : ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೈದ್ಯಕೀಯ ಕಾರಣ ನೀಡಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ನ್ಯಾಯಾಲಯ ಕಾಯ್ದಿರಿಸಿದೆ. ನ್ಯಾಯಾಲಯವು ಪ್ರಕರಣವನ್ನು ಜೂನ್ 5ಕ್ಕೆ ಮುಂದೂಡಿದೆ.

  ಇದನ್ನು ಓದಿhttps://www.vijayavani.net/flood-in-manipur-four-people-died-and-several-injured

  ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲು ಅರ್ಜಿ ಸಲ್ಲಿಸಲಾಗಿದೆಯೇ ಹೊರತು ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ವಿಸ್ತರಣೆಗೆ ಅಲ್ಲ ಎಂದು ಗಮನಿಸಿದ ನ್ಯಾಯಾಲಯವು ಆದೇಶವನ್ನು ಕಾಯ್ದಿರಿಸಿದೆ.

  ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಈ ಹಿಂದೆ ನೀಡಿದ್ದ ಮಧ್ಯಂತರ ಜಾಮೀನು ಶನಿವಾರ (ಜೂನ್​​ 1) ಕೊನೆಗೊಳ್ಳುತ್ತದೆ. ಆದ್ದರಿಂದ ಅರವಿಂದ್​​ ಕೇಜ್ರಿವಾಲ್​ ಅವರು ಜೂನ್​​ 2(ಭಾನುವಾರ)ರೊಳಗೆ ತಿಹಾರ್​ ಜೈಲಿಗೆ ಮರಳಬೇಕಿದೆ.

  ಕೇಜ್ರಿವಾಲ್ ಅವರು ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ವಿಸ್ತರಿಸಲು ಕೋರಿದ್ದರು. ಆದರೆ, ಸುಪ್ರೀಂಕೋರ್ಟ್ ಕಚೇರಿಯು ಅವರ ಮನವಿಯನ್ನು ಸ್ವೀಕರಿಸಲು ನಿರಾಕರಿಸಿ, ನಿಯಮಿತ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಅವರಿಗೆ ಸ್ವಾತಂತ್ರ್ಯವಿದೆ ಎಂದು ಹೇಳಿತು. ನಂತರ ಸಿಎಂ ಕೇಜ್ರಿವಾಲ್​ ಅವರು ದೆಹಲಿಯ ರೂಸ್ ಹೌಸ್ ನ್ಯಾಯಾಲಯದಲ್ಲಿ ಸಾಮಾನ್ಯ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

  ಹಶ್​​ ಮನಿ ಪ್ರಕರಣದಲ್ಲಿ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೋಷಿ

  See also  ತಬ್ಲಿಘಿ ಜಮಾತ್​ನ ಎಲ್ಲ ಚಟುವಟಿಕೆಗಳನ್ನು ಬ್ಯಾನ್​ ಮಾಡುವಂತೆ ಕೋರಿ ಸುಪ್ರಿಂಕೋರ್ಟ್​ಗೆ ಅರ್ಜಿ ಸಲ್ಲಿಕೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts