More

    ಕುತೂಹಲ ಮೂಡಿಸಿದ ಭೇಟಿ: ಪ್ರಧಾನಿ ಮೋದಿ ಜತೆ ಮಮತಾ ಬ್ಯಾನರ್ಜಿ ಮಾತುಕತೆ!

    ಪಶ್ಚಿಮ ಬಂಗಾಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಸಂಜೆ ರಾಜಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

    ಇದನ್ನೂ ಓದಿ:ಎಸ್.ಸಿ.ಎಸ್ ರಿವರ್ ಸೈಡ್ ಇಂಟರ್‌ನ್ಯಾಶನಲ್ ಶಾಲಾ ವಾರ್ಷಿಕೋತ್ಸವ

    ಮೋದಿ ಅವರನ್ನು ಭೇಟಿ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಮಮತಾ, ರಾಷ್ಟ್ರಪತಿಗಳು, ಪ್ರಧಾನ ಮಂತ್ರಿ ರಾಜ್ಯಕ್ಕೆ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡುವುದು, ಮನುಷ್ಯನ ಸೌಜನ್ಯ ಮತ್ತು ಶಿಷ್ಟಾಚಾರದ ಭಾಗವಾಗ ಎಂದು ಹೇಳಿದರು.

    ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಹಲವಾರು ವಿಷಯಗಳ ಕುರಿತು ಮೋದಿ ಜತೆ ಚರ್ಚೆ ನಡೆಸಲಾಯಿತು. ರಾಜ್ಯದ ಆಡಳಿತ ಮತ್ತು ಸಮಗ್ರ ಅಭಿವೃದ್ಧಿ ವಿಷಯಗಳ ಬಗ್ಗೆ ಕುರಿತು ಚರ್ಚೆ ನಡೆಸಿದ್ದೇನೆ. ನಾನು ಪ್ರಧಾನ ಮಂತ್ರಿಯೊಂದಿಗೆ ತಮ್ಮ ಮಾತುಕತೆಯ ಸಂದರ್ಭದಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿದ್ದೇನೆ ಎಂದ ಅವರು ಮಮತಾ ಅವರು ರಾಜ್ಯಕ್ಕೆ ಬರಬೇಕಾದ ಬಾಕಿ ಹಣವನ್ನು ಬಿಡುಗಡೆ ಮಾಡಲು ಈ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ ಹೇಳಿದರು. ಟಿಎಂಸಿ ಪ್ರಕಾರ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳಕ್ಕೆ 1.18 ಲಕ್ಷ ಕೋಟಿ ಬಾಕಿ ಇರಿಸಿಕೊಂಡಿದೆ ಎಂದು ವರದಿಯಾಗಿದೆ.

    ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಭ್ರಷ್ಟಾಚಾರದ ಹಿಂದೆ ಇರುವವರನ್ನು ರಕ್ಷಿಸಲು ಬಂಗಾಳ ಸಿಎಂ ಪ್ರತಿಭಟನೆಗೆ ಕುಳಿತಿದ್ದಾರೆ. ಪಶ್ಚಿಮ ಬಂಗಾಳವನ್ನು ಲೂಟಿ ಮಾಡಿದವರು ಲೂಟಿಯನ್ನು ಹಿಂದಿರುಗಿಸಬೇಕು’ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ‘ಲೂಟಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಮೋದಿಯವರ ಗ್ಯಾರಂಟಿ’ ಎಂದು ಹೇಳಿದರು.

    ತೃಣಮೂಲ ಕಾಂಗ್ರೆಸ್ ಪಕ್ಷ ಪ್ರಬಲ ವ್ಯಕ್ತಿ ಶೇಖ್ ಷಹಜಹಾನ್‌ನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇವೆ ಎಂದು ಸಂದೇಶ್​​ಖಾಲಿ ಮಹಿಳೆಯರು ಆರೋಪಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಟಿಎಂಸಿ ಮತ್ತು ಇಂಡಿಯಾ ಬ್ಲಾಕ್​​ನ ಮೈತ್ರಿ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

    ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ಮಾಡಿ ರೈಲು, ಬಂದರುಗಳು, ತೈಲ ಪೈಪ್‌ಲೈನ್, ಎಲ್‌ಪಿಜಿ ಪೂರೈಕೆ ಮತ್ತು ತ್ಯಾಜ್ಯನೀರಿನ ಸಂಸ್ಕರಣೆಗೆ ಸಂಬಂಧಿಸಿದ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಯಿತು. ಈ ಯೋಜನೆಗಳ ಪೈಕಿ, ಸರಿಸುಮಾರು 2,790 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿರುವ ಇಂಡಿಯನ್ ಆಯಿಲ್‌ನ 518-ಕಿಮೀ ಉದ್ದದ ಹಲ್ದಿಯಾ-ಬರೌನಿ ಕಚ್ಚಾ ತೈಲ ಪೈಪ್‌ಲೈನ್ ಅನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಿದರು.

    ಮುಂಬರುವ ಲೋಕಸಭಾ ಸಮರವನ್ನು ಗೆಲ್ಲಲ್ಲೇಬೇಕೆಂದು ಹಠ ಹಿಡಿದಿರುವ ಪ್ರಧಾನಿ ಮೋದಿ ಈಗಾಗಲೇ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಇನ್ನು ಮೂರು ರಾಜ್ಯಗಳಲ್ಲಿ ಮೈತ್ರಿಇಲ್ಲದೆ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಸಿಎಂ ಮಮತಾ ಬ್ಯಾನರ್ಜಿ ಅವರು ಹೇಳಿದ್ದು, ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಹರಸಾಹಸ ಪಡುತ್ತಿದ್ದಾರೆ. ಮೋದಿ ಅವರನ್ನು ಶುಕ್ರವಾರ ಭೇಟಿಯಾಗಿರುವುದು ಇಂಡಿಯಾ ಮೈತ್ರಿಕೂಟದಲ್ಲಿ ಕುತೂಹಲ ಮೂಡಿಸಿದೆ.

    ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಎನ್ಐಎಗೆ ಒಪ್ಪಿಸಲು ವಿಜಯೇಂದ್ರ ಆಗ್ರಹ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts