More

    ಚುನಾವಣಾ ಪ್ರಚಾರದ ಮೇಲೂ ಕರೋನಾ ಕರಿಛಾಯೆ: ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಸಂಖ್ಯೆ ಕಡಿತ

    ಬೆಂಗಳೂರು : ಕರೋನಾ ಸೋಂಕಿನ ಕರಿಛಾಯೆ ಚುನಾವಣಾ ಪ್ರಚಾರದ ಮೇಲೂ ಬಿದ್ದಿದೆ. ಸೋಂಕು ಹರಡದಂತೆ ರಚಿಸಿದ ನಿಯಮಾವಳಿ ಪ್ರಕಾರ, ಕಟ್ಟುನಿಟ್ಟಿನ ಕ್ರಮಗಳನ್ನು ಎಲ್ಲರೂ ಅನುಸರಿಸಬೇಕಾಗಿ ಬಂದಿದೆ. ಈ ನಡುವೆ, ಕರೊನಾ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗ ಕೂಡ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಸಂಖ್ಯೆಯನ್ನು ಮಿತಿಗೊಳಿಸಿ ಆದೇಶ ಹೊರಡಿಸಿದೆ.

    ಈ ಹಿಂದೆ ಕೇಂದ್ರ ಚುನಾವಣಾ ಆಯೋಗವು ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪಕ್ಷಗಳಿಗೆ 40 ಸ್ಟಾರ್ ಪ್ರಚಾರಕರನ್ನು ಬಳಸಿಕೊಳ್ಳುವ ಅವಕಾಶ ನೀಡಲಾಗಿತ್ತು. ಆದರೆ, ಈ ಸಂಖ್ಯೆಯಲ್ಲಿ ಬದಲಾವಣೆ ಮಾಡಿ 30 ಸ್ಟಾರ್ ಪ್ರಚಾರಕರನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ. ಅದೇ ರೀತಿಯಲ್ಲಿ ನೊಂದಾಯಿತ ರಾಜಕೀಯ ಪಕ್ಷಗಳಿಗೆ ನೀಡಲಾಗಿದ್ದ 20 ಸ್ಟಾರ್ ಪ್ರಚಾರಕರ ಸಂಖ್ಯೆಯನ್ನು 15ಕ್ಕೆ ಇಳಿಸಿ ಪರಿಷ್ಕೃತ ಆದೇಶ ನೀಡಿದೆ.

    ಇದನ್ನೂ ಓದಿ: ವೆಹಿಕಲ್​ ಫಿಟ್​ನೆಸ್ ಸರ್ಟಿಫಿಕೇಟ್ ತಗೊಳ್ಳೋಕೆ ಇನ್ನು ಪರದಾಡಬೇಕಾಗಿಲ್ಲ !

    ರಾಜ್ಯದಲ್ಲಿ ಪ್ರಸ್ತುತ ಘೋಷಣೆಯಾಗಿರುವ ವಿಧಾನಸಭಾ ಉಪ ಚುನಾವಣೆಗಳಿಗೆ ಈ ಪರಿಷ್ಕೃತ ಆದೇಶ ಅನ್ವಯವಾಗಲಿದೆ. ರಾಜಕೀಯ ಪಕ್ಷಗಳು ಸ್ಟಾರ್ ಪ್ರಚಾರಕರ ಸಭೆಗಳ ಕುರಿತು ಮುಖ್ಯ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯಲು ಚುನಾವಣೆ ಅಧಿಸೂಚನೆಯ ದಿನಾಂಕದಿಂದ ಇದ್ದ ಒಂದು ವಾರದ ಗಡುವನ್ನು 10 ದಿನಗಳಿಗೆ ವಿಸ್ತರಿಸಲಾಗಿದೆ. ಸ್ಟಾರ್ ಪ್ರಚಾರಕರ ಸಭೆಗಳಿಗೆ ಕನಿಷ್ಠ 48 ಗಂಟೆಗಳ ಮುಂಚೆ ಅನುಮತಿಗಾಗಿ ರಾಜಕೀಯ ಪಕ್ಷಗಳು ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

    ‘ನಬನ್ನಾ’ವನ್ನು ಇಂದು ನಾಳೆ ಮುಚ್ಚಿರುವುದೇಕೆ?: ಬಿಜೆಪಿ ಯುವಮೋರ್ಚಾದ ನಬನ್ನಾ ಚಲೋಕ್ಕೆ ಬೆದರಿದರೇ ದೀದಿ?!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts