More

    ನಿಯಮ ಪಾಲಿಸದ ನರ್ಸಿಂಗ್ ಕಾಲೇಜು – 15 ವಿದ್ಯಾರ್ಥಿಗಳಿಗೆ ಕರೊನಾ ಸೋಂಕು

    ಮಂಗಳೂರು: ಕೋವಿಡ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸದೇ ವಿದ್ಯಾರ್ಥಿಗಳನ್ನು ಕರೆಯಿಸಿಕೊಂಡು ತರಗತಿ ಆರಂಭಿಸಿದ್ದ ನರ್ಸಿಂಗ್ ಕಾಲೇಜಿನಲ್ಲಿ 15 ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ತಗುಲಿದೆ. ಮಂಗಳೂರಿನ ಸಿಟಿ ನರ್ಸಿಂಗ್ ಕಾಲೇಜು ಮತ್ತು ರುಕ್ಮಿಣಿ ಶೆಟ್ಟಿ ಮೆಮೋರಿಯಲ್ ನರ್ಸಿಂಗ್​ ಕಾಲೇಜುಗಳು ಈ ರೀತಿ ನಿರ್ಲಕ್ಷ್ಯ ತೋರಿದ್ದು, ಅವುಗಳಿಗೆ ಸರ್ಕಾರ ನೋಟಿಸ್ ಜಾರಿಗೊಳಿಸಿದೆ.

    ಜನವರಿ ಒಂದರಿಂದ ತರಗತಿ ಆರಂಭಿಸುವುದಾಗಿ ಹೇಳಿದ್ದರಿಂದ ಕೇರಳದಿಂದ 613 ವಿದ್ಯಾರ್ಥಿಗಳು ಆಗಮಿಸಿದ್ದರು. ಈ ಪೈಕಿ 200 ವಿದ್ಯಾರ್ಥಿಗಳಷ್ಟೇ ಕೋವಿಡ್ ಟೆಸ್ಟ್ ಮಾಡಿಸಿ ನೆಗೆಟಿವ್ ವರದಿ ತಂದಿದ್ದರು. ಉಳಿದ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆಯೇ ಟೆಸ್ಟ್ ಮಾಡಿಸಿದೆ. 15 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದ್ದು, ಅವರನ್ನು ಐಸೋಲೇಷನ್​ನಲ್ಲಿ ಇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

    ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆ: ತಳಮಟ್ಟದಲ್ಲಿ ಸಂಘಟನೆಯ ಕೆಲಸ ಚುರುಕುಗೊಳಿಸಿದ ಬಿಜೆಪಿ

    ಈ ಘಟನೆ ಬೆನ್ನಿಗೆ ಎಲ್ಲ ನರ್ಸಿಂಗ್ ಕಾಲೇಜುಗಳಿಗೆ ಜಾಗೃತಿ ಸುತ್ತೋಲೆ ಕಳುಹಿಸಿರುವ ಆರೋಗ್ಯ ಇಲಾಖೆ, ತರಗತಿ ಆರಂಭದ 72 ಗಂಟೆಗೂ ಮುನ್ನ ಟೆಸ್ಟ್ ಮಾಡಿಸಿ ನೆಗೆಟಿವ್ ವರದಿ ಹೊಂದಿರಬೇಕು. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಭೋದಕೇತರ ಸಿಬ್ಬಂದಿ ಇದನ್ನು ಕಡ್ಡಾಯ ಮಾಡಿಸಬೇಕು. ಇಲ್ಲದಿದ್ದರೆ ಶಿಕ್ಷಣ ಸಂಸ್ಥೆಗಳ ವಿರುದ್ದ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ.

    ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

    ದೇಶದ ಮೊದಲ ಚಾಲಕ ರಹಿತ ಮೆಟ್ರೋ ಸೇವೆಗೆ ಚಾಲನೆ ನೀಡಿದ್ರು ಪ್ರಧಾನಿ ಮೋದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts