More

    ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್

    ಲಕ್ಷ್ಮೇಶ್ವರ: ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಕೇಂದ್ರ ಆರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಭಾರಿ ತಹಸೀಲ್ದಾರ್ ಎಸ್.ಆರ್. ಸಿದ್ದನಗೌಡರ ಹೇಳಿದರು.
    ಸಮೀಪದ ಒಡೆಯರಮಲ್ಲಾಪುರ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಬುಧವಾರ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ನಿತ್ಯ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಮಾಡುವ, ಅಂತರ್ ಜಿಲ್ಲೆ ಮತ್ತು ರಾಜ್ಯದಿಂದ ಗ್ರಾಮಕ್ಕೆ ಬಂದು ಸೇರಿಕೊಂಡ ಕರೊನಾ ಸೋಂಕಿತರು, ಸೋಂಕಿನ ಲಕ್ಷಣಗಳು ಕಂಡು ಬಂದವರಿಗೆ ಸೂಕ್ತ ಚಿಕಿತ್ಸೆ, ವಸತಿ, ಉಟೋಪಚಾರದ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಕೋವಿಡ್ ಕೇರ್ ಸೆಂಟರ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು.
    ಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿನ ಲಕ್ಷಣಗಳುಳ್ಳ ವ್ಯಕ್ತಿಗಳ ಮನವೊಲಿಸಿ ಕೇಂದ್ರಕ್ಕೆ ಕರೆತರಲು ಪ್ರತಿ ಗ್ರಾಪಂ, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಂಘ-ಸಂಸ್ಥೆಗಳ ಪಾತ್ರ ಮುಖ್ಯವಾಗಿದೆ. 100 ಬೆಡ್​ಗಳ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್​ನಲ್ಲಿ ಸದ್ಯ 40 ಬೆಡ್​ಗಳ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಚಿಕಿತ್ಸೆ, ಊಟೋಪಚಾರ ವ್ಯವಸ್ಥೆ ಕಲ್ಪಿಸಲಾಗುವುದು. ಸೋಂಕಿನ ಲಕ್ಷಣಗಳುಳ್ಳವರು ಸ್ವಯಂಪ್ರೇರಿತವಾಗಿ ಕೋವಿಡ್ ಸೆಂಟರ್​ನ ಸದುಪಯೋಗ ಪಡೆದುಕೊಳ್ಳಬೇಕು. ಈ ಬಗ್ಗೆ ಯಾರೂ ಭಯ, ಸಂಕೋಚ, ಉದಾಸೀನತೆ ತೋರಬಾರದು ಎಂದರು.
    ಉಪತಹಸೀಲ್ದಾರ್ ಮಂಜುನಾಥ ದಾಸಪ್ಪನವರ, ತಾಪಂ ಇಒ ಆರ್.ವೈ. ಗುರಿಕಾರ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ, ಆರೋಗ್ಯ ಇಲಾಖೆಯ ಬಿ.ಎಸ್. ಹಿರೇಮಠ, ಮಂಜುನಾಥ ಮುದಗಲ್, ಮುಖ್ಯಶಿಕ್ಷಕ ಹತ್ತಿಕಾಳ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts